ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ ಜೋಡಿ | ನೈಟ್ ಕರ್ಫ್ಯೂಗೆ ಸಿದ್ದರಾಮಯ್ಯ ಪ್ರತಿಕ್ರಿಯೆ
ಬೆಂಗಳೂರು: ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಹೇರಿರುವ ಬಿಜೆಪಿ ಸರ್ಕಾರದ ಕ್ರಮ ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆತ್ತಿಗೊಂಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ ಜೋಡಿ! ರಾತ್ರಿ ತೆರೆದಿರುವ ಹೊಟೇಲ, ಚಿತ್ರಮಂದಿರ ಮತ್ತು ಅಂಗಡಿಮುಂಗಟ್ಟುಗಳನ್ನು ಮುಚ್ಚಿದರೆ ಸಾಲದೇ? ಕೊರೊನಾ ನಿಯಂತ್ರಣಕ್ಕೆ ಯಾವ ರೀತಿಯಲ್ಲಿಯೂ ಉಪಯೋಗವಾಗದ ಆಯ್ದ ನಗರಗಳಲ್ಲಿ ರಾತ್ರಿ ಕಪ್ರ್ಯೂವಿನ ನಾಟಕ ಯಾಕೆ ? ಎಂದು ಪ್ರಶ್ನಿಸಿದ್ದಾರೆ.
ಕೊರೊನಾ ನಿಯಂತ್ರಿಸುವ ಪ್ರಾಮಾಣಿಕ ಇಚ್ಚೆ ಹೊಂದಿದ್ದರೆ ಮೊದಲು ಕೊರೊನಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಮಕೈಗೊಳ್ಳಿ, ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು ಮತ್ತು ಸೋಂಕಿತರಿಗೆ ತಕ್ಷಣ ಚಿಕಿತ್ಸೆ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Provided by

Provided by

Provided by

Provided by

Provided by

Provided by

Provided by

Provided by

Provided by

Provided by

Provided by
ಕೋವಿಡ್ ವ್ಯಾಕ್ಸಿನ್ ಪ್ರಾರಂಭಿಸಿ 80 ದಿನಗಳು ಕಳೆದರೂ ಕೇವಲ ಶೇಕಡಾ ಒಂದರಷ್ಟು ಜನಸಂಖ್ಯೆಗೆ ಮಾತ್ರ ನೀಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಈಗಾಗಲೇ ಲಸಿಕೆ ಕೊರತೆ ಇರುವ ದೂರು ಕೇಳಿಬರತೊಡಗಿದೆ. ಗಿಮಿಕ್‍ಗಳನ್ನು ಬಿಟ್ಟು ಈ ಕಡೆ ಗಮನಹರಿಸಿ ಎಂದು ಅವರು ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಂಧಾ ದರ್ಬಾರ್‍ನಿಂದ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪೂರ್ತಿ ಪಡೆದರೆ, ಮುಖ್ಯಮಂತ್ರಿಗಳಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳೇ ನೀವು ಸ್ವಲ್ಪ ಬುದ್ದಿ ಕಲಿಯಿರಿ ಅವರಿಗೂ ಬುದ್ದಿ ಹೇಳಿ ಎಂದು ಸಿದ್ದರಾಮಯ್ಯ ಸಿಎಂಗೆ ಬುದ್ಧಿ ಹೇಳಿದ್ದಾರೆ.




























