ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣ: ತನ್ನ ವಿರುದ್ಧ ದಾಖಲಾದ ಕೇಸ್ ರದ್ದು ಮಾಡಲು ಅಲ್ಲು ಅರ್ಜುನ್ ಹೈಕೋರ್ಟ್ ಮೊರೆ - Mahanayaka

ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣ: ತನ್ನ ವಿರುದ್ಧ ದಾಖಲಾದ ಕೇಸ್ ರದ್ದು ಮಾಡಲು ಅಲ್ಲು ಅರ್ಜುನ್ ಹೈಕೋರ್ಟ್ ಮೊರೆ

allu arjun
12/12/2024

ಹೈದರಾಬಾದ್ : ಪುಷ್ಪ 2 ಪ್ರೀಮಿಯರ್ ಶೋ ಹೈದರಾಬಾದ್ ನ ಸಂಧ್ಯಾ  ಥಿಯೇಟರ್ ನಡೆಯುತ್ತಿದ್ದ ವೇಳೆ ಉಂಟಾದ ನೂಕುನುಗ್ಗಲಿನಲ್ಲಿ ಮಹಿಳೆ ಕಾಲ್ತುಳಿತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಸಂಬಂಧ ತನ್ನ ವಿರುದ್ಧ ದಾಖಲಾಗಿರುವ  ಪ್ರಕರಣವನ್ನು ರದ್ದುಗೊಳಿಸುವಂತೆ ನಟ ಅಲ್ಲು ಅರ್ಜುನ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಲ್ಲು ಅರ್ಜುನ್ ಕೂಡ ಆರೋಪಿ ಎಂದು ಹೆಸರಿಸಿದ್ದಾರೆ.  ಈ ಹಿನ್ನೆಲೆ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸಲು ಅಲ್ಲು ಅರ್ಜುನ್  ಕೋರ್ಟ್ ಮೆಟ್ಟಿಲೇರಿದ್ದಾರೆ.


ADS

ಈಗಾಗಲೇ ಅಲ್ಲು ಅರ್ಜುನ್ ಸಂತ್ರಸ್ತೆಯ ಕುಟುಂಬಕ್ಕೆ 25 ಲಕ್ಷ ರೂಪಾಯಿಗಳ ಪರಿಹಾರವನ್ನೂ ಘೋಷಿಸಿದ್ದಾರೆ. ಈ ನಡುವೆ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಮಾಡುವಂತೆ ಹೈಕೋರ್ಟ್ ಮೊರೆ ಹೋಗಿದ್ದಾರೆ.  ಈ ಅರ್ಜಿ ಶೀಘ್ರವೇ ವಿಚಾರಣೆಗೆ ಬರಲಿದೆ. ನ್ಯಾಯಾಲಯ ಯಾವ ತೀರ್ಮಾನ ಕೈಗೊಳ್ಳಲಿದೆ ಎನ್ನುವುದನ್ನ ಕಾದು ನೋಡಬೇಕಿದೆ.

ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಕಾಲ್ತುಳಿತ ಘಟನೆಗೆ ಅಲ್ಲು ಅರ್ಜುನ್ ಕೂಡ ಕಾರಣ ಎಂದು ಪೊಲೀಸರು ಉಲ್ಲೇಖಿಸಿದ್ದಾರೆ. ಈ ಘಟನೆಯಲ್ಲಿ ಅಲ್ಲು ಅರ್ಜುನ್ ಅವರ ಕಾರಿಗೆ ಕೂಡ ಡ್ಯಾಮೇಜ್ ಆಗಿದೆ ಅಂತ ಹೇಳಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ