'ಪುಷ್ಪ 2' ಸ್ಕ್ರೀನಿಂಗ್ ಕಾಲ್ತುಳಿತ ಪ್ರಕರಣ: ಪೊಲೀಸರಿಂದ ಅಲ್ಲು ಅರ್ಜುನ್ ವಿಚಾರಣೆ - Mahanayaka

‘ಪುಷ್ಪ 2’ ಸ್ಕ್ರೀನಿಂಗ್ ಕಾಲ್ತುಳಿತ ಪ್ರಕರಣ: ಪೊಲೀಸರಿಂದ ಅಲ್ಲು ಅರ್ಜುನ್ ವಿಚಾರಣೆ

24/12/2024

ಹೈದರಾಬಾದ್ ನಗರದ ಸಂಧ್ಯಾ ಚಿತ್ರಮಂದಿರದಲ್ಲಿ ತಮ್ಮ ಇತ್ತೀಚಿನ ಚಿತ್ರ ‘ಪುಷ್ಪ 2: ದಿ ರೈಸ್’ ಪ್ರದರ್ಶನದ ಸಮಯದಲ್ಲಿ ಉಂಟಾದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರಿಗೆ ಹೈದರಾಬಾದ್ ಪೊಲೀಸರು ಸೋಮವಾರ ಹೊಸ ನೋಟಿಸ್ ನೀಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಅಲ್ಲು ಅರ್ಜುನ್ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಮೂಲಗಳು ಇಂಡಿಯಾ ಟುಡೇ ಟಿವಿಗೆ ತಿಳಿಸಿವೆ.

ಡಿಸೆಂಬರ್ 4 ರಂದು ಹೈದರಾಬಾದ್ ನ ಪ್ರಸಿದ್ಧ ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿಯಲ್ಲಿ 35 ವರ್ಷದ ಮಹಿಳೆ ಸಾವನ್ನಪ್ಪಿದ್ದರು ಮತ್ತು ಅವರ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲು ಅರ್ಜುನ್ ಅವರ ದರ್ಶನ ಪಡೆಯಲು ಸಾವಿರಾರು ಅಭಿಮಾನಿಗಳು ಧಾವಿಸಿದ್ದರಿಂದ ಈ ಘಟನೆ ನಡೆದಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ