ವಿದ್ಯಾರ್ಥಿಗಳ ಜೀವನದ ಜೊತೆಗೆ ಬೆಂಗಳೂರು ನಗರ ವಿವಿ ಚೆಲ್ಲಾಟ: ವೇಣುಗೋಪಾಲ್ ಮೌರ್ಯ
	
	
	
	
	
ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಕಳಪೆ ಗುಣಮಟ್ಟದ ಮೌಲ್ಯ ಮಾಪನ ಮಾಡಲಾಗಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪ್ರಜಾಸತ್ತತ್ಮಕ ದಲಿತ ವಿದ್ಯಾರ್ಥಿ ಒಕ್ಕೂಟ ರಾಜ್ಯ ಸಂಚಾಲಕ ವೇಣುಗೋಪಾಲ್ ಮೌರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಕಷ್ಟು ಸಂಖ್ಯೆಯ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ನೀಡಲಾಗಿದ್ದು, ಹಲವಾರು ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಲಾಗಿದೆ. ವಿದ್ಯಾರ್ಥಿಗಳು ನಮಗೆ ನಕಲು ಪ್ರತಿಯನ್ನು ನೀಡಿ ಎಂದು ಕೇಳಿದರೆ, ನಕಲು ಪ್ರತಿಯನ್ನು ನೀಡದೇ ವಿದ್ಯಾರ್ಥಿಗಳನ್ನು ಸತಾಯಿಸಲಾಗುತ್ತಿದೆ ಎಂದು ವೇಣುಗೋಪಾಲ್ ಆರೋಪಿಸಿದರು.
ವಿದ್ಯಾರ್ಥಿಗಳಿಗೆ ನಕಲು ಪ್ರತಿಗೆ ಅವಕಾಶ ನೀಡದೇ ಇರುವುದು UGC ಮಾರ್ಗ ಸೂಚಿಯ 6.9 ಅಂಶಕ್ಕೆ ವಿರುದ್ಧವಾಗಿದೆ. ವಿಶ್ವ ವಿದ್ಯಾಲಯವು ಪಾರದರ್ಶಕತೆಯನ್ನು ತೋರುತ್ತಿಲ್ಲ. ಈ ಮೂಲಕ ವಿದ್ಯಾರ್ಥಿಗಳ ಜೀವನದ ಜೊತೆಗೆ ಆಟವಾಡುತ್ತಿದೆ. ಈ ಬಗ್ಗೆ ತಕ್ಷಣವೇ ಸಂಬಂಧಪಟ್ಟವರು ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

























