ಕರ್ನಾಟಕದಲ್ಲಿ ಪ್ರಭಾವಿ ದಲಿತ ನಾಯಕರಿದ್ದರೂ ಸಿಎಂ ಸ್ಥಾನ ಸಿಗಲಿಲ್ಲ: ಹೆಚ್.ಸಿ.ಮಹದೇವಪ್ಪ ಬೇಸರ - Mahanayaka

ಕರ್ನಾಟಕದಲ್ಲಿ ಪ್ರಭಾವಿ ದಲಿತ ನಾಯಕರಿದ್ದರೂ ಸಿಎಂ ಸ್ಥಾನ ಸಿಗಲಿಲ್ಲ: ಹೆಚ್.ಸಿ.ಮಹದೇವಪ್ಪ ಬೇಸರ

h c mahadevappa
06/03/2024


Provided by

ಬೆಂಗಳೂರು: ದಲಿತ ಸಿಎಂ ವಿಚಾರವಾಗಿ ಸಚಿವ ಹೆಚ್.ಸಿ.ಮಹದೇವಪ್ಪನವರು ನೀಡಿರುವ ಹೇಳಿಕೆ ಇದೀಗ ರಾಜ್ಯದಲ್ಲಿ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ.

ರಾಜ್ಯಮಟ್ಟದ ಎಸ್ ಸಿ, ಎಸ್ ಟಿ ನೌಕರರ ಸಮಾವೇಶದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ದಲಿತ ಸಿಎಂ ಆಗದೇ ಇರಲು ಕಾರಣ, ನಮ್ಮ ನಾಯಕತ್ವವನ್ನು ನಾವು ಬೆಳೆಸದೇ ಇರುವುದೇ ಕಾರಣ ಎಂದು ಹೇಳಿದ್ದು, ಇದೀಗ ದಲಿತ ಸಿಎಂ ಚರ್ಚೆ ಮತ್ತೆ ಹುಟ್ಟಲು ಕಾರಣವಾಗಿದೆ.

ರಾಜ್ಯದಲ್ಲಿ ದಲಿತರಿಗೆ ಸಿಎಂ ಆಗುವ ಅವಕಾಶ ಸಿಗಲಿಲ್ಲ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಮತ್ತು ನಾನು ಪಾಲಿಸಿ ಮೇಕಿಂಗ್ ಸ್ಥಾನದಲ್ಲಿಲ್ಲ ಎಂದು ಮಹದೇವಪ್ಪ ಹೇಳಿದ್ದಾರೆ.
ಸಿದ್ದರಾಮಯ್ಯ, ಯಡಿಯೂರಪ್ಪ, ದೇವೇಗೌಡರು ಯಾಕೆ ಸಿಎಂ ಆದರು? ಎಂದು ಪ್ರಶ್ನಿಸಿದ ಅವರು, ನೀವು ನಾಯಕರನ್ನು ಫಾಲೋ ಮಾಡುತ್ತಿಲ್ಲ ಎಂದು ಸಮುದಾಯದ ಎದುರು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಒಗ್ಗಟ್ಟಾಗಿ ಪಕ್ಷಕ್ಕೆ ಮತ ನೀಡಿದ ಬಳಿಕವೂ ಸಿಎಂ ಸ್ಥಾನ ಕೊಡಿ ಅಂತ ಕೇಳುವಂತಹ ಪರಿಸ್ಥಿತಿ ನಮ್ಮದಾಗಿದೆ. ಮತ ನಮ್ಮದು ಆದ್ರೆ ನಾಯಕತ್ವ ಬೇರೆಯಾರದೋ ಬಳಿಯಿದೆ. ನಾವು ನಮ್ಮ ನಾಯಕತ್ವವನ್ನು ಬೆಳೆಸದೇ ಇರುವುದೇ ಇದಕ್ಕೆ ಕಾರಣ ಎಂದು ಮಹದೇವಪ್ಪ ಹೇಳಿದರು.
ಕರ್ನಾಟಕದಲ್ಲಿ ಪ್ರಭಾವಿ ದಲಿತ ನಾಯಕರಿದ್ದರೂ ಸಿಎಂ ಸ್ಥಾನ ಸಿಗಲಿಲ್ಲ, ಆದರೂ ನಮ್ಮ ಪ್ರಭಾವ ಬಳಸಿ ಎಸ್ ಸಿಪಿ, ಟಿಎಸ್ ಪಿ ಕಾಯ್ದೆ, ಮುಂಬಡ್ತಿ ಮೀಸಲಾತಿ ಸೇರಿದಂತೆ ಕೆಲವು ಐತಿಹಾಸಿಕ ತೀರ್ಮಾನ ಮಾಡಿಸಿದ್ದೇವೆ ಎಂದು ಅವರು ಇದೇ ವೇಳೆ ಹೇಳಿದರು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ