ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಸಾವಿಗೆ ಶರಣು! - Mahanayaka
11:13 PM Tuesday 21 - October 2025

ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಸಾವಿಗೆ ಶರಣು!

police
23/11/2024

ಮೂಡುಬಿದಿರೆ:  ಆಳ್ವಾಸ್ ಕಾಲೇಜಿನ  ವಿದ್ಯಾರ್ಥಿಯೊಬ್ಬ ವಸತಿ ನಿಲಯದ ಕಿಟಕಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ  ಶುಕ್ರವಾರ ಬೆಳಕಿಗೆ ಬಂದಿದೆ.

ಬೆಂಗಳೂರು ಹೊಸೂರು ನಿವಾಸಿ, ಆಳ್ವಾಸ್ ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎಂ ವಿದ್ಯಾಭ್ಯಾಸ ಮಾಡುತ್ತಿದ್ದ ಶಶಾಂಕ್ ಸಾವಿಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ.

ಕಾಲೇಜಿನ ಯಮುನಾ ಬಾಲಕರ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವಿಗೆ ಶರಣಾಗಿದ್ದಾನೆ. ಡೆತ್ ನೋಟ್ ಕೂಡ ಬರೆದಿಟ್ಟಿದ್ದಾನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ  ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮೂಡುಬಿದಿರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ