12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅಂಬೇಡ್ಕರ್ ಭವನದ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ - Mahanayaka

12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಅಂಬೇಡ್ಕರ್ ಭವನದ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ

22/10/2020

ಬೆಳಗಾವಿ: ಸಮಾಜ ಕಲ್ಯಾಣ ಇಲಾಖೆಯ ಅನುದಾನ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯು ಕಾರ್ಯರೂಪಕ್ಕೆ ತಂದಂತಹ ಒಟ್ಟು ಹನ್ನೆರಡು ಲಕ್ಷ ರೂ,ಗಳ ವೆಚ್ಚದಲ್ಲಿ ” ಅಂಬೇಡ್ಕರ್ ಭವನ ” ಕಟ್ಟಡ ನಿರ್ಮಾಣದ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೂಮಿ ಪೂಜೆ ನೆರವೇರಿಸಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಂಗರಗಾ ಗ್ರಾಮದಲ್ಲಿ ಒಟ್ಟು 12 ಲಕ್ಷ ರೂ ವೆಚ್ಚದಲ್ಲಿ ಈ ಅಂಬೇಡ್ಕರ್ ಭವನದ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗ್ರಾಮಸ್ಥರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಭೂಮಿ ಪೂಜೆ ಸಲ್ಲಿಸಿ, ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮದ ಗುರು ಹಿರಿಯರು, ಯುವರಾಜಣ್ಣಾ ಕದಂ, ಮಹೇಶ ಕುಲಕರ್ಣಿ, ಗೋಪಾಲ್ ಕಾಂಬಳೆ, ಮಲ್ಲೇಶ ಚೌಗುಲೆ, ಬಾಳಕೃಷ್ಣ, ದೀಲಿಪ್ ಕಾಂಬಳೆ, ಕುರುಂಡಿ, ಗುಂಡು, ಬಾಳು ಪಾಟೀಲ, ಅರ್ಜುನ ಪಾಟೀಲ, ಬಸವಣ್ಣಿ, ರಾಮಚಂದ್ರ, ಕಲ್ಲಪ್ಪ, ಭೀಮಸೇನ, ಶಿವಾಂಗಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ