ಕಲಬುರ್ಗಿಯಲ್ಲಿ ಅಂಬೇಡ್ಕರ್ ಪುತ್ಥಳಿ ಧ್ವಂಸ ಪ್ರಕರಣ: ನಾಲ್ವರು ಅರೆಸ್ಟ್

24/01/2024
ಕಲಬುರ್ಗಿ: ಕಲಬುರ್ಗಿಯಲ್ಲಿ ಅಂಬೇಡ್ಕರ್ ಪುತ್ಥಳಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಹಿಂದಿನ ಕಾರಣ ತಿಳಿದುಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ, ತನಿಖೆ ಪ್ರಗತಿಯಲ್ಲಿದೆ ಎಂದರು.
ಕೃತ್ಯದ ಹಿಂದಿರುವ ವ್ಯಕ್ತಿಗಳ ಪಾತ್ರ ಹೊರಬಂದ ನಂತರ ಬಿಜೆಪಿ ಮೂಕಪ್ರೇಕ್ಷಕವಾಗಲಿದೆ. ನಮಗೆ ಮಾಹಿತಿ ಇದ್ದರೂ ಎಲ್ಲವನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ. ಪುರಾವೆಗಳನ್ನು ಸಂಗ್ರಹಿಸಬೇಕಾಗಿದೆ ಮತ್ತು ನಾವು ಊಹೆ ಮಾಡುವುದಕ್ಕೆ ಸಾಧ್ಯವಿಲ್ಲ. ಈ ಕೃತ್ಯಕ್ಕೆ ಯೋಜನೆ ರೂಪಿಸಿದವರು ಯಾರು, ಏಕೆ ಮಾಡಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯಬೇಕಿದೆ ಎಂದು ಇದೇ ವೇಳೆ ಅವರು ಹೇಳಿದರು.