ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಕಡ್ಡಾಯ!

10/04/2024
ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ, ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿ, ಎಸ್ ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಿಭಾಗಿತ್ವದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸುವಂತೆ ಎಲ್ಲಾ ಶಾಲಾ ಮುಖ್ಯಸ್ಥರಿಗೆ, ಕ್ಷೇತ್ರ ಶಿಕ್ಷಾಣಧೀಕರಿಗಳಿಗೆ, ಉಪ ನಿರ್ದೇಶಕರಿಗೆ ತಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth