ಡಾ. ಅಂಬೇಡ್ಕರ್ ಮಹಾಪರಿನಿರ್ವಾಣ ದಿನ | ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ಕೋಟ್ಯಂತರ ಜನರಿಂದ ಭೀಮ ನಮನ - Mahanayaka

ಡಾ. ಅಂಬೇಡ್ಕರ್ ಮಹಾಪರಿನಿರ್ವಾಣ ದಿನ | ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ಕೋಟ್ಯಂತರ ಜನರಿಂದ ಭೀಮ ನಮನ

06/12/2020

ನವದೆಹಲಿ: ಆಧುನಿಕ ಭಾರತದ ನಿರ್ಮಾತೃ, ಸಂವಿಧಾನ ಪಿತ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣದ ದಿನದಂದು  ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಮುಂಬೈನ ದಾದರ್ ನ ಚೈತ್ಯ ಭೂಮಿಯಲ್ಲಿ ಪ್ರತಿ ವರ್ಷವೂ ಕೊಟ್ಯಂತರ ಜನರು ಸೇರ್ಪಡೆಗೊಳ್ಳುತ್ತಿದ್ದು, ಈ ವರ್ಷ ಕೊರೊನಾ ಭೀತಿಯ ನಡುವೆಯೂ ಅಂಬೇಡ್ಕರ್ ಸೇನಾನಿಗಳು ಶಿಸ್ತಿನ ಸಿಪಾಯಿಗಳಂತೆ  ಕೊವಿಡ್ ನಿಯಮಗಳನ್ನು ಪಾಲಿಸಿಕೊಂಡು ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.

ಇನ್ನೂ ಬಾಬಾ ಸಾಹೇಬರಿಗೆ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿದ ಪ್ರಧಾನಿ ಮೋದಿ, ಅಂಬೇಡ್ಕರ್ ಅವರ ಆಲೋಚನೆ ಮತ್ತು ಅಭಿಪ್ರಾಯಗಳು ಲಕ್ಷಾಂತರ ಜನರಿಗೆ ಶಕ್ತಿ ನೀಡುತ್ತದೆ. ನಮ್ಮ ದೇಶದ ಬಗ್ಗೆ ಇಟ್ಟಿರುವ ಕನಸನ್ನು ಈಡೇರಿಸಲು ನಾವು ಬದ್ಧವಾಗಿದ್ದೇವೆ ಎಂದು ಹೇಳಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಡಿಸೆಂಬರ್ 6ರಂದು ನಿಧನರಾಗಿದ್ದರು. ಅವರ ನಿಧನ ದಿನವನ್ನು ಬೌದ್ಧ ಧರ್ಮದ ಪ್ರಕಾರ ಪರಿನಿಬ್ಬಾಣ ಅಥವಾ ಪರಿನಿರ್ವಾಣವಾದರು ಎಂದು ಹೇಳಲಾಗುತ್ತದೆ.  ಅಂಬೇಡ್ಕರ್ ಅವರು ಬೌದ್ಧ ಧರ್ಮಕ್ಕೆ  ಮರಳುವ ಮೂಲಕ ಶೋಷಿತರಿಗೆ ಬಿಡುಗಡೆ  ತೋರಿಸಿಕೊಟ್ಟರು. ಆದರೆ ಇಂದಿಗೂ ಶೋಷಿತರು ಕೆಳ ಜಾತಿಯವರಾಗಿ, ಅಸ್ಪೃಶ್ಯರಾಗಿ, ದಲಿತರಾಗಿ ಹಿಂದೂ ಧರ್ಮದಲ್ಲಿಯೇ ಇದ್ದಾರೆ.

ಇತ್ತೀಚಿನ ಸುದ್ದಿ