ನಕ್ಸಲ್ ವಿಕ್ರಂ ಗೌಡನ ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಪಲ್ಟಿ! - Mahanayaka

ನಕ್ಸಲ್ ವಿಕ್ರಂ ಗೌಡನ ಮೃತದೇಹ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಪಲ್ಟಿ!

vikram gowda
20/11/2024


Provided by

ಉಡುಪಿ: ಎನ್ ಕೌಂಟರ್ ನಲ್ಲಿ ಮೃತಪಟ್ಟಿದ್ದ ನಕ್ಸಲ್ ವಿಕ್ರಂ ಗೌಡನ ಮೃತದೇಹವನ್ನು ಅಂತ್ಯ ಸಂಸ್ಕಾರಕ್ಕೆ ತೆಗೆದುಕೊಂಡು ಹೋಗುತ್ತಿದ್ದ  ವೇಳೆ ಆ್ಯಂಬುಲೆನ್ಸ್ ಪಲ್ಟಿಯಾಗಿರುವ ಘಟನೆ  ನಡೆಯಿತು.

ಹೆಬ್ರಿಯ ಕೂಡ್ಲು ಸಮೀಪದಲ್ಲಿ ಈ ಘಟನೆ ನಡೆದಿದೆ. ಕೆಎಂಸಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅಂತ್ಯಸಂಸ್ಕಾರಕ್ಕಾಗಿ ವಿಕ್ರಂ ಗೌಡನ ಮೃತದೇಹವನ್ನು  ಆ್ಯಂಬುಲೆನ್ಸ್ ಮೂಲಕ ಸಾಗಿಸಲಾಗಿತ್ತುತ್ತು.  ಈ ವೇಳೆ ಏಕಾಏಕಿ ದನವೊಂದು ಆ್ಯಂಬುಲೆನ್ಸ್ ಗೆ ಅಡ್ಡ ಬಂದಿದೆ. ದನವನ್ನು ರಕ್ಷಿಸುವ ಭರದಲ್ಲಿ  ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ಕಳೆದುಕೊಂಡು  ರಸ್ತೆ ಬದಿಯಲ್ಲಿದ್ದ ತೋಡಿಗೆ ಬಿದ್ದಿದೆ.

ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಸ್ಥಳೀಯರ ಸಹಕಾರದೊಂದಿಗೆ ಆ್ಯಂಬುಲೆನ್ಸ್ ನ್ನು ತೋಡಿನಿಂದ ಮೇಲೆತ್ತಿ,  ಮತ್ತೆ ಮೃತದೇಹವನ್ನು ವಿಕ್ರಂ ಗೌಡನ ಸ್ವಗ್ರಾಮ ಕೂಡ್ಲುಗೆ ಸುಗಮವಾಗಿ ಸಾಗಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ