4:52 AM Wednesday 22 - October 2025

ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ: ಮೂವರು ಸಾವು

ambulence
08/06/2023

ಚಿತ್ರದುರ್ಗ: ನಿಂತಿದ್ದ ಲಾರಿಗೆ ಮೃತದೇಹ  ಸಾಗಿಸುತ್ತಿದ್ದ ಆ್ಯಂಬುಲೆನ್ಸ್​​  ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ಕನಕಮಣಿ (72), ಆಕಾಶ್ (17) ಮತ್ತು ಆ್ಯಂಬುಲೆನ್ಸ್ ಚಾಲಕ ಸಾವನ್ನಪ್ಪಿದವರಾಗಿದ್ದಾರೆ. ಮುಂಜಾನೆ  ಆ್ಯಂಬುಲೆನ್ಸ್​ ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಈ ವೇಳೆ ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್​ ಹೋಗಿ ಡಿಕ್ಕಿ ಹೊಡೆದಿದೆ.

ಆ್ಯಂಬುಲೆನ್ಸ್ ನಲ್ಲಿ ಅಹಮದಾಬಾದ್ ನಿಂದ ತಮಿಳುನಾಡಿಗೆ ಶವ ಸಾಗಿಸುವ ವೇಳೆ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ.

ಆ್ಯಂಬುಲೆಬನ್ಸ್​ ಅಪಘಾತದಲ್ಲಿ ಜ್ಞಾನ ಶೇಖರ್ , ಮೌಳಿ ರಾಜನ್ ಎಂಬುವವರಿಗೆ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version