ಅಮೆರಿಕ ದೊಡ್ಡ ತಪ್ಪು ಮಾಡಿದೆ, ಕಠಿಣ ಪ್ರತಿಕ್ರಿಯೆ ನೀಡುತ್ತೇವೆ: ಇರಾನ್ ನಾಯಕ ಖಮೇನಿ ಎಚ್ಚರಿಕೆ

ayatollah ali khamenei
23/06/2025

ಇರಾನ್:  ಇರಾನ್ ಮೇಲೆ ದಾಳಿ ನಡೆಸಿ ಅಮೆರಿಕ ದೊಡ್ಡ ತಪ್ಪು ಮಾಡಿದೆ. ಅಮೆರಿಕಕ್ಕೆ ಕಠಿಣ ಮತ್ತು ಸೂಕ್ತ ಪ್ರತಿಕ್ರಿಯೆ ನೀಡುವುದಾಗಿ ಇರಾನ್ ಸುಪ್ರೀಂ ನಾಯಕ ಆಯತೊಲ್ಲಾ ಖಮೇನಿ ಎಚ್ಚರಿಕೆ ನೀಡಿದ್ದಾರೆ.

ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡಿರುವ ಖಮೇನಿ ಇರಾನ್ ಸುಪ್ರೀಂ ನಾಯಕ ಆಯತೊಲ್ಲಾ ಖಮೇನಿ ಪ್ರತಿಜ್ಞೆ ಮಾಡಿದ್ದಾರೆ.

ಇನ್ನೂ,  ಅಮೆರಿಕವು ಇರಾನ್‌ ಮೇಲೆ ದಾಳಿ ನಡೆಸಿದ ಕೆಲವೇ ಘಂಟೆಗಳಲ್ಲಿ ಇರಾನ್‌ ದೇಶವು ಇಸ್ರೇಲ್‌ ವಿರುದ್ದ ಮತ್ತೆ ಭೀಕರ ದಾಳಿ ನಡೆಸುವ ಮೂಲಕ ಅಮೆರಿಕದ ಬೆದರಿಕೆಗಳಿಗೆ ಬಗ್ಗುವುದಿಲ್ಲ ಎನ್ನುವ ಸಂದೇಶವನ್ನು ರವಾನಿಸಿದೆ.

ಇಸ್ರೇಲ್ ಆರಂಭಿಸಿದ ಯುದ್ಧದಲ್ಲಿ ಇದೀಗ ಅಮೆರಿಕ ಕೂಡ ಸೇರ್ಪಡೆಯಾಗಿದೆ. ಇರಾನ್ ನ ಮೂರು ಪರಮಾಣು ತಾಣಗಳ ಮೇಲೆ ದಾಳಿ ನಡೆಸಿದ್ದ ಅಮೆರಿಕ ಇದು ಆರಂಭವಷ್ಟೇ, ಇನ್ನೂ ಕೆಲವು ಗುರಿಗಳು ಬಾಕಿ ಇದೆ ಟ್ರಂಪ್ ಎಚ್ಚರಿಕೆ ನೀಡಿದ್ದರು. ಆದರೆ ಇದರ ನಡುವೆಯೂ ಇರಾನ್ ಇಸ್ರೆಲ್ ಮೇಲೆ ಮತ್ತೆ ದಾಳಿ ಮುಂದುವರಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version