ಅಂಬೇಡ್ಕರ್ ರನ್ನು ಕಾಂಗ್ರೆಸ್ ಲೆಕ್ಕಕ್ಕೇ ಇಟ್ಟುಕೊಂಡಿಲ್ಲ: ಪ್ರಧಾನಿ ಮೋದಿ ಆರೋಪ

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಕಡಿತಗೊಳಿಸಿ, ಅದನ್ನು ಮುಸ್ಲಿಮರಿಗೆ ಹಂಚಲು ಕಾಂಗ್ರೆಸ್ ಉದ್ದೇಶಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷವೇನಾದರೂ ಅಧಿಕಾರಕ್ಕೆ ಬಂದರೆ, ಜನರ ಸಂಪತ್ತನ್ನು ಮುಸ್ಲಿಮರಿಗೆ ಹಂಚಲಿದೆ ಎಂಬ ವಿವಾದಾತ್ಮಕ ಹೇಳಿಕೆಯನ್ನು ಎರಡು ದಿನಗಳ ಹಿಂದೆಯಷ್ಟೇ ಮೋದಿ ನೀಡಿದ್ದರು.
ಟಾಂಕ್-ಸವಾಯಿ ಮಾಧೋಪುರ್ ನಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಸಂವಿಧಾನದೊಂದಿಗೆ ಹುಡುಗಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.
“೨೦೦೪ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ, ಆಂಧ್ರಪ್ರದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಂದ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ನಿರ್ಧರಿಸಿತ್ತು. ಆದರೆ, ಅದರಲ್ಲಿ ವಿಫಲವಾಯಿತು. ೨೦೧೧ರಲ್ಲಿ ಈ ಮೀಸಲಾತಿಯನ್ನು ದೇಶಾದ್ಯಂತ ಜಾರಿಗೊಳಿಸಲು ಪ್ರಯತ್ನಿಸಿತ್ತು. ಹಾಗೆ ಮಾಡುವುದು ಸಂವಿಧಾನಕ್ಕೆ ವಿರುದ್ಧ ಎಂಬುದನ್ನೂ ಅರಿಯದೆ ಅವರು ಹಾಗೆ ಮಾಡಿದ್ದರು. ಅವರು ಸಂವಿಧಾನವನ್ನಾಗಲಿ ಅಥವಾ ಬಿ.ಆರ್.ಅಂಬೇಡ್ಕರ್ ಅವರನ್ನಾಗಲಿ ಲೆಕ್ಕಕ್ಕೇ ಇಟ್ಟುಕೊಂಡಿಲ್ಲ” ಎಂದು ಮೋದಿ ದೂರಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth