ಮಂಗಳೂರು ಲಾಡ್ಜ್ ನಲ್ಲಿ ಮೈಸೂರಿನ ಕುಟುಂಬ ಸಾವಿಗೆ ಶರಣು: ಮತ್ತಷ್ಟು ವಿವರಗಳು
ಮಂಗಳೂರು : ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣಾಗಿದ್ದಾರೆ. ಮಂಗಳೂರು ನಗರದ ಕೆ.ಎಸ್.ರಾವ್ ರಸ್ತೆಯಲ್ಲಿರುವ ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಮೈಸೂರು ಮೂಲದ ದೇವೇಂದ್ರ (48), ಪತ್ನಿ ನಿರ್ಮಲಾ ಹಾಗೂ 9 ವರ್ಷದ ಅವಳಿ ಮಕ್ಕಳಾದ ಚೈತನ್ಯ, ಚೈತ್ರಾ ಎಂದು ಗುರುತಿಸಲಾಗಿದೆ.
ಮೈಸೂರಿನ ವಿಜಯನಗರ ಮೂಲದ ದೇವೇಂದ್ರ ಅವರು ಪತ್ನಿ ಹಾಗೂ ಪುತ್ರಿಯರನ್ನು ಮೊದಲು ಹತ್ಯೆ ಮಾಡಿದ್ದಾರೆ. ಆ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಮೃತದೇಹಗಳ ಬಳಿ ಡೆತ್ ನೋಟ್ ಪತ್ತೆಯಾಗಿದೆ. ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದ್ದಾರೆ. ನಾಲ್ವರಲ್ಲಿ ಓರ್ವ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ, ಉಳಿದ ಮೂವರು ಮೃತದೇಹಗಳು ಮಲಗಿದ ಸ್ಥಿತಿಯಲ್ಲಿದ್ದವು.
ಮೂರು ದಿನಗಳಿಂದ ಲಾಡ್ಜ್ ನಲ್ಲಿ ವಾಸ್ತವ್ಯ ಹೂಡಿದ್ದರು. ಒಂದು ದಿನಕ್ಕೆ ಲಾಡ್ಜ್ ಬುಕ್ ಮಾಡಿದ್ದು ಆ ಬಳಿಕ ಎರಡು ದಿನಗಳಿಗೆ ವಿಸ್ತರಿಸಿದ್ದರು. ನಿನ್ನೆ ಸಂಜೆ ರೂಂ ಚೆಕ್ ಔಟ್ ಮಾಡಬೇಕಿತ್ತು. ಇಂದು ಬೆಳಗ್ಗೆ ಬಾಗಿಲು ತೆರೆಯದೇ ಇದ್ದಾಗ ಅನುಮಾನಗೊಂಡು ತಪಾಸಣೆ ಮಾಡಿದಾಗ ವಿಚಾರ ಬೆಳಕಿಗೆ ಬಂದಿದೆ.
ಕೂಡಲೇ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್ ಮತ್ತು ಬಂದರು ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























