ಡಿ.ವಿ.ಸದಾನಂದ ಗೌಡಗೆ ಕರೆ ಮಾಡಿ ಬಿಗ್ ಶಾಕ್ ನೀಡಿದ ಅಮಿತ್ ಶಾ!

amith shah
13/03/2024

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ ಇದೇ ಸಂದರ್ಭದಲ್ಲಿ ಕರ್ನಾಟಕ ಬಿಜೆಪಿಯಲ್ಲಿ ಟಿಕೆಟ್ ಕೋಲಾಹಲವೇ ಸೃಷ್ಟಿಯಾಗಿದೆ. ಮೈಸೂರು—ಕೊಡಗು ಕ್ಷೇತ್ರದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿರುವುದು ಬಹುತೇಕ ಖಚಿತವಾಗಿರುವ ನಡುವೆಯೇ ಬಿಜೆಪಿಯ ಮತ್ತೋರ್ವ ಹಿರಿಯ ನಾಯಕ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿ.ವಿ.ಸದಾನಂದ ಗೌಡ ಅವರಿಗೂ ಟಿಕೆಟ್ ಕೈತಪ್ಪಿದೆ ಎನ್ನಲಾಗಿದೆ.

ಟಿಕೆಟ್ ಕೈತಪ್ಪಿರುವ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಸದಾನಂದ ಗೌಡ ಅವರ ಜೊತೆಗೆ ಫೋನ್ ಕರೆ ಮಾಡಿ ಮಾತಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಸದಾನಂದ ಗೌಡ ಅವರಿಗೆ ಟಿಕೆಟ್ ಇಲ್ಲ ಎನ್ನುವುದನ್ನು ಖುದ್ದು ಶಾ ಅವರೇ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನೂ ಈ ವಿಚಾರದ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿರುವ ಸದಾನಂದ ಗೌಡ,  ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮತದಾರರಿಗೆ ವಿಶೇಷ ಧನ್ಯವಾದಗಳನ್ನು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಜೊತೆಗೆ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶ ಕೂಡ ಕಲ್ಪಿಸಿದ್ದಾರೆ, ಇದಕ್ಕಾಗಿ ನಿಮಗೆಲ್ಲರಿಗೂ ಚಿರರುಣಿ ಎಂದು ಅವರು  ತಿಳೀಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version