ಮಣಿಪುರಕ್ಕೆ ಬೆಂಕಿ: ಇಂದು ಸರ್ವಪಕ್ಷ ಸಭೆ ಕರೆದ ಅಮಿತ್ ಶಾ; ಪ್ರಧಾನಿಗೆ ಈ ಸಭೆ ಮುಖ್ಯವಲ್ಲವೇ ಎಂದು ಪ್ರಶ್ನಿಸಿದ ರಾಹುಲ್ ಗಾಂಧಿ

ಮಣಿಪುರದಲ್ಲಿನ ಹಿಂಸಾಚಾರದ ಪರಿಸ್ಥಿತಿ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಷ್ಟ್ರ ರಾಜಧಾನಿಯಲ್ಲಿ ಸರ್ವಪಕ್ಷ ಸಭೆ ನಡೆಸಲಿದ್ದಾರೆ. ಈ ಸಭೆ ಮಧ್ಯಾಹ್ನ 3 ಗಂಟೆಗೆ ಸಭೆ ನಿಗದಿಯಾಗಿದೆ.
ಮೇ 3 ರಿಂದ ಮಣಿಪುರ ಇನ್ನೂ ಅಗ್ನಿಸ್ಪರ್ಶದಂತಹ ಘಟನೆಗಳಿಗೆ ಸಾಕ್ಷಿಯಾಗುತ್ತಿರುವುದರಿಂದ, ಶಾಂತಿಗೆ ಮತ್ತಷ್ಟು ಭಂಗವಾಗುವುದನ್ನು ತಡೆಗಟ್ಟುವ ಪ್ರಯತ್ನದಲ್ಲಿ ರಾಜ್ಯ ಸರ್ಕಾರವು ಇಂಟರ್ ನೆಟ್ ಮೇಲಿನ ನಿಷೇಧವನ್ನು ಜೂನ್ 25 ರವರೆಗೆ ಇನ್ನೂ ಐದು ದಿನಗಳವರೆಗೆ ವಿಸ್ತರಿಸಿದೆ. ರಾಜ್ಯದಲ್ಲಿ ಆಗುತ್ತಿರುವ ನಿರಂತರ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು ಡೇಟಾ ಸೇವೆಗಳನ್ನು ಸಹ ನಿಷೇಧಿಸಲಾಗಿದೆ.
ಮೇ 3 ರಂದು ಅಖಿಲ ಬುಡಕಟ್ಟು ವಿದ್ಯಾರ್ಥಿ ಸಂಘ (ಎಟಿಎಸ್ಯು) ಆಯೋಜಿಸಿದ್ದ ರ್ಯಾಲಿಯಲ್ಲಿ ಘರ್ಷಣೆಗಳು ಭುಗಿಲೆದ್ದ ನಂತರ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಮಣಿಪುರದಲ್ಲಿ ಜನರ ಜೀವನವನ್ನು ನಾಶಪಡಿಸಿದ ಹಿಂಸಾಚಾರವು ‘ನಮ್ಮ ರಾಷ್ಟ್ರದ ಆತ್ಮಸಾಕ್ಷಿಗೆ ಆಳವಾದ ಗಾಯವನ್ನುಂಟು ಮಾಡಿದೆ’ ಎಂದು ಹೇಳಿದರು.
ಜನಾಂಗೀಯ ಹಿಂಸಾಚಾರ ಮತ್ತು ಘರ್ಷಣೆಗಳ ಹಿನ್ನೆಲೆಯಲ್ಲಿ ಮಣಿಪುರದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕರೆದ ಸರ್ವಪಕ್ಷ ಸಭೆಯ ಸಮಯವನ್ನು ಪ್ರಶ್ನಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಯುನೈಟೆಡ್ ಸ್ಟೇಟ್ಸ್ ಗೆ ಅಧಿಕೃತ ಭೇಟಿಯಲ್ಲಿರುವ ಸಮಯದಲ್ಲಿ ಇದನ್ನು ಕರೆಯಲಾಗಿದೆ. ಆದರೆ ಪ್ರಧಾನಿಯವರಿಗೆ ಈ ಸಭೆ ಮುಖ್ಯವಲ್ಲ ಎಂದು ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.
‘ಮಣಿಪುರವು 50 ದಿನಗಳಿಂದ ಉರಿಯುತ್ತಿದೆ. ಆದರೆ ಪ್ರಧಾನಿ ಮೌನವಾಗಿದ್ದಾರೆ. ಪ್ರಧಾನಿ ಸ್ವತಃ ದೇಶದಲ್ಲಿ ಇಲ್ಲದಿದ್ದಾಗ ಸರ್ವಪಕ್ಷ ಸಭೆ ಕರೆಯಲಾಗಿದೆ. ಸ್ಪಷ್ಟವಾಗಿ ಈ ಸಭೆಯು ಪ್ರಧಾನಿಗೆ ಮುಖ್ಯವಾಗಿಲ್ಲ’ ಎಂದು ಅವರು ಕಿಡಿಕಾರಿದ್ದಾರೆ.
ಏತನ್ಮಧ್ಯೆ, ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ್ ಅವರು ಮಣಿಪುರದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಅವರ ಮೌನವನ್ನು ತೀವ್ರವಾಗಿ ಟೀಕಿಸಿದ್ದಾರೆ. ಕಳೆದ 53 ದಿನಗಳಿಂದ ಮಣಿಪುರ ಉರಿಯುತ್ತಿದೆ. ಪ್ರಧಾನಿ ಮೋದಿ ಇನ್ನೂ ಒಂದೇ ಒಂದು ಮಾತನ್ನೂ ಆಡಿಲ್ಲ. ಮಣಿಪುರದ ನಿಯೋಗವು ಕಳೆದ 10 ದಿನಗಳಿಂದ ಇಲ್ಲಿಗೆ ಬಂದಿತ್ತು. ಆದರೆ ಪ್ರಧಾನಿ ಅವರನ್ನು ಭೇಟಿ ಮಾಡಲು ಸಿದ್ಧರಿರಲಿಲ್ಲ ಎಂದು ವೇಣುಗೋಪಾಲ್ ಆರೋಪಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw