ಅಮಿತ್ ಶಾ ಸ್ವಾಗತಕ್ಕೆ ಮಂಡ್ಯ ಸಜ್ಜು: ಸಚಿವ ಕೆ.ಗೋಪಾಲಯ್ಯ - Mahanayaka
5:42 PM Tuesday 16 - September 2025

ಅಮಿತ್ ಶಾ ಸ್ವಾಗತಕ್ಕೆ ಮಂಡ್ಯ ಸಜ್ಜು: ಸಚಿವ ಕೆ.ಗೋಪಾಲಯ್ಯ

gopalaiha
29/12/2022

ಮಂಡ್ಯ : ಶುಕ್ರವಾರ ಮಂಡ್ಯ ಜಿಲ್ಲೆಗೆ ಆಗಮಿಸುತ್ತಿರುವ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರ ಸ್ವಾಗತಕ್ಕೆ ಎಲ್ಲ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.


Provided by

ನಗರದ ವಿವಿ ಆವರಣದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅನೇಕ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ಜ್ವಲಂತ ಸಮಸ್ಯೆಗಳನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ ಬಗೆಹರಿಸಿದೆ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಬೇರುಮಟ್ಟದಿಂದ ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಎಲ್ಲ ಏಳು ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ.‌ಎಲ್ಲ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಸಮರ್ಥ ಅಭ್ಯರ್ಥಿಗಳಿದ್ದಾರೆ. ಕಾರ್ಯಕ್ರಮದ ಯಶಸ್ವಿಗಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ಲಕ್ಷಕ್ಕೂ ಅಧಿಕ ಜನರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಅಮಿತ್ ಶಾ ಅವರೊಂದಿಗೆ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ‌ಜೋಷಿ, ರಾಜ್ಯದ ಸಚಿವರು, ಪಕ್ಷದ ರಾಜ್ಯಾಧ್ಯಕ್ಷರು ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ