ಅಮಿತ್ ಶಾ ವಿರುದ್ಧ ಸಮನ್ಸ್ ಜಾರಿ ಮಾಡಿದ ಕೋರ್ಟ್ - Mahanayaka
12:05 PM Wednesday 20 - August 2025

ಅಮಿತ್ ಶಾ ವಿರುದ್ಧ ಸಮನ್ಸ್ ಜಾರಿ ಮಾಡಿದ ಕೋರ್ಟ್

19/02/2021


Provided by

ಕೋಲ್ಕತ್ತಾ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪಶ್ಚಿಮ ಬಂಗಾಳದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ನೀಡಿದ್ದು, ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಈ ಸಮನ್ಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಈ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ  ಫೆ.22ರಂದು ಅಮಿತ್ ಶಾ ಖುದ್ದು ಇಲ್ಲವೇ ತಮ್ಮ ವಕೀಲರ ಮೂಲಕ ಹಾಜರಾಗಬೇಕೆಂದು ಬಿಧಾನ್ ನಗರದಲ್ಲಿನ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಐಪಿಸಿ ಸೆಕ್ಷನ್ 500ರ ಅಡಿಯಲ್ಲಿ ಅಮಿತ್ ಶಾ ವಿರುದ್ಧ  ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಈ ಆರೋಪಕ್ಕೆ ಉತ್ತರಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.  2018ರ ಆಗಸ್ಟ್‌ 11ರಂದು ಕೋಲ್ಕತ್ತಾದ ಮಾಯೋ ರಸ್ತೆಯಲ್ಲಿ ನಡೆದಿದ್ದ ಬಿಜೆಪಿ ಸಮಾವೇಶದಲ್ಲಿ ಅಮಿತ್ ಶಾ ಸಂಸದ ಅಭಿಷೇಕ್ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಎಂದು ಅಭಿಷೇಕ್ ಪರ ವಕೀಲ ಸಂಜಯ್ ಬಸು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ