ಅಮ್ತಿ ಹೊಳೆಕೂಡಿಗೆ ಮಲೆಕುಡಿಯ ಕುಟುಂಬ ಗಳಿಂದ ಚುನಾವಣೆ ಬಹಿಷ್ಕಾರ: ರಸ್ತೆ ಇಲ್ಲದೇ ತೆಪ್ಪದಲ್ಲಿ ಸಂಚಾರ

kottigehara
04/05/2023

ಕೊಟ್ಟಿಗೆಹಾರ: ರಸ್ತೆ ಸೌಕರ್ಯ ಕಲ್ಪಿಸದೇ ಇರುವುದರಿಂದ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸಲು ಅಮ್ತಿ ಹೊಳೆಕೂಡಿಗೆ ಗ್ರಾಮದ ಮಲೆಕುಡಿಯ ಕುಟುಂಬಗಳು ನಿರ್ಧರಿಸಿವೆ.

ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಮಲೆಕುಡಿಯ ಕುಟುಂಬದ ಮುಖ್ಯಸ್ಥ ಸತೀಶ್, ಕೂವೆ ಸಮೀಪ ಅಮ್ತಿ ಹೊಳೆಕೂಡಿಗೆಯಲ್ಲಿ ನಾಲ್ಕು ಮಲೆಕುಡಿಯ ಕುಟುಂಬಗಳು ವಾಸವಾಗಿದ್ದು ಮನೆಗಳ ಸುತ್ತ ಭದ್ರಾನದಿ ಆವರಿಸಿರುವುದರಿಂದ ಮುಖ್ಯ ರಸ್ತೆಗೆ ಸಂಪರ್ಕ ಇಲ್ಲದಂತಾಗಿದೆ. ಮನೆ ಕಟ್ಟಲು ಮರಳು, ಇಟ್ಟಿಗೆ ಮುಂತಾದ ಕಚ್ಚಾವಸ್ತುಗಳನ್ನು ತೆಪ್ಪದಲ್ಲೆ ತರಬೇಕಾಗಿದೆ. ೨೦೧೫ ರಿಂದ ರಸ್ತೆಗಾಗಿ ಹೋರಾಟ ಮಾಡಿಕೊಂಡು ಬಂದಿದ್ದರೂ ರಸ್ತೆ ಅಥವಾ ತೂಗು ಸೇತುವೆ ನಿರ್ಮಾಣವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಲವು ಅಧಿಕಾರಿಗಳು, ಜನಪ್ರತಿನಿಧಿಗಳು ಗ್ರಾಮಕ್ಕೆ ಬಂದರೂ ಕೇವಲ ಭರವಸೆ ನೀಡಿ ಹೋಗುತ್ತಾರೆ. ಜನಪ್ರತಿನಿಧಿಗಳ, ಅಧಿಕಾರಿಗಳ ಭರವಸೆ ಕೇಳಿ ಸಾಕಾಗಿದೆ. ಆದ್ದರಿಂದ ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version