ಆಂಬುಲೆನ್ಸ್ ಮುಂದೆ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ ಆರೋಪಿ ಪೊಲೀಸ್ ವಶಕ್ಕೆ - Mahanayaka

ಆಂಬುಲೆನ್ಸ್ ಮುಂದೆ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ ಆರೋಪಿ ಪೊಲೀಸ್ ವಶಕ್ಕೆ

mangalore police
20/07/2021


Provided by

ಮಂಗಳೂರು: ಆಂಬುಲೆನ್ಸ್ ನ  ಮುಂದೆ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ವ್ಯಕ್ತಿಯೋರ್ವ ವಿಕೃತಿ ಮೆರೆದಿದ್ದು,  ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಆರೋಪಿ ಹಾಗೂ ಆತನ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


Provided by

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ರೋಗಿಯೋರ್ವರನ್ನು  ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಬರುತ್ತಿದ್ದ ವೇಳೆ  KA 19  MJ 8924  ಸಂಖ್ಯೆಯ ಇರ್ಟಿಗಾ ಕಾರ್ ನ್ನು ಆಂಬುಲೆನ್ಸ್ ಮುಂದೆ ಅಡ್ಡಾದಿಡ್ಡಿಯಾಗಿ ಚಲಾಯಿಸಲಾಗಿದ್ದು,  ಇದರಿಂದಾಗಿ ಆಂಬುಲೆನ್ಸ್ ಚಾಲನೆಗೆ ಅಡ್ಡಿಯಾಗಿತ್ತು.

ಈ ವಿಡಿಯೋ ವೈರಲ್ ಆಗಿ ಸಾರ್ವಜನಿಕವಾಗಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.  ಘಟನೆ ಸಂಬಂಧ ಸ್ವಯಂ ಪ್ರೇರಿಯರಾಗಿ ತನಿಖೆ ಕೈಗೊಂಡ ಮಂಗಳೂರು ಪೊಲೀಸರು ಆರೋಪಿಯನ್ನು ಪತ್ತೆ ಮಾಡಿದ್ದು, ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು 31 ವರ್ಷ ವಯಸ್ಸಿನ ಚರಣ್ ಎಂಬಾತನನ್ನು  ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.


Provided by

ಇನ್ನಷ್ಟು ಸುದ್ದಿಗಳು…

ನಳಿನ್ ಕುಮಾರ್ ಕಟೀಲ್ ಆಡಿಯೋ ಸೋರಿಕೆ ಮಾಡಿದ್ದು ಇವರಂತೆ!

ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ, ಅತ್ಯಾಚಾರಕ್ಕೆ ಯತ್ನ

ಮುಖಕ್ಕೆ ಹಾಕುವ ಮಾಸ್ಕ್ ನ್ನು ಬಿಜೆಪಿ ಸಚಿವ ಹಾಕಿದ್ದೆಲ್ಲಿಗೆ ಗೊತ್ತಾ? | ಫೋಟೋ ವೈರಲ್

ಪತಿವ್ರತೆ ಎಂದು ಸಾಬೀತು ಪಡಿಸಲು ಮಹಿಳೆಯನ್ನು ಕುದಿಯುವ ಎಣ್ಣೆಗೆ ಕೈ ಹಾಕಿಸಿದರು!

ಇತ್ತೀಚಿನ ಸುದ್ದಿ