ಕೆರೆಯ ಬಳಿ ಪತ್ತೆಯಾಗಿತ್ತು ಬೈಕ್, ಮೊಬೈಲ್, ಚಪ್ಪಲಿ: ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ ಆತ್ಮಹತ್ಯೆಗೆ ಶರಣು - Mahanayaka

ಕೆರೆಯ ಬಳಿ ಪತ್ತೆಯಾಗಿತ್ತು ಬೈಕ್, ಮೊಬೈಲ್, ಚಪ್ಪಲಿ: ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ ಆತ್ಮಹತ್ಯೆಗೆ ಶರಣು

surikumer
02/10/2023

ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ನಡೆದಿದೆ.

ಮೃತರನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್ಲೈಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ.

ಸೋಮವಾರ ಮುಂಜಾನೆ ಪರ್ಲೊಟ್ಟು ಎಂಬಲ್ಲಿನ ಕೆರೆಯ ಬಳಿ ಬೈಕ್, ಮೊಬೈಲ್, ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ ಕೆರೆಗೆ ಹಾರಿ ಆತ್ಮಹತ್ಯೆಗೈದಿರಬೇಕು ಎಂಬ ಸಂಶಯದಿಂದ ವಿಟ್ಲ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದು ಕೆರೆಯಲ್ಲಿ ಹುಡುಕಾಟ ನಡೆಸಿ ಮೃತದೇಹವನ್ನು ಹೊರಗೆ ತೆಗೆದಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ