12:33 AM Saturday 1 - November 2025

ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ತಡೆಯಲು ಬಂದ ಪತಿಗೆ ಮಚ್ಚಿನಿಂದ ಹಲ್ಲೆ

mysore case
18/12/2023

ಮೈಸೂರು: ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯೋರ್ವ ತಡೆಯಲು ಬಂದ ಮಹಿಳೆಯ ಪತಿಗೆ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.

ನವೀನ್‌ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿ, ಹಲ್ಲೆ ನಡೆಸಿ ಪರಾರಿಯಾದ  ಆರೋಪಿಯಾಗಿದ್ದಾನೆ. ಮೈಸೂರು ಮೂಲದ ವ್ಯಕ್ತಿ ತೋಟವೊಂದರಲ್ಲಿ ತನ್ನ ಪತ್ನಿಯ ಜೊತೆಗೆ ಕೂಲಿ ಕೆಲಸ ಮಾಡುತ್ತಿದ್ದ. ಇದೇ ವೇಳೆ ತೋಟದಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಆರೋಪಿ, ತೋಟದ ತಂತಿ ಬೇಲಿ ಜಿಗಿದು ಮಹಿಳೆ ಮೇಲೆ ದಾಳಿ ನಡೆಸಿದ್ದಾನೆ.

ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರಕ್ಕೆ ಯತ್ನಿಸಿದ ವೇಳೆ ಸಂತ್ರಸ್ತೆ ಜೋರಾಗಿ ಕಿರುಚಾಡಿದ್ದು, ಈ ವೇಳೆ ಪತ್ನಿಯ ಕಿರುಚಾಟ ಕೇಳಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಪತಿ ಓಡಿ ಬಂದಿದ್ದಾನೆ. ಈ ವೇಳೆ ಆತನಿಗೆ ಮಚ್ಚಿನಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಸದ್ಯ ಸಂತ್ರಸ್ತೆ ಹಾಗೂ ಆಕೆಯ ಪತಿಯನ್ನು ನಂಜನಗೂಡಿನ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹುಲ್ಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

Exit mobile version