ರಸ್ತೆಯಲ್ಲಿ ಓಡಾಟ ನಡೆಸಿದ ಒಂಟಿ ಸಲಗ: ಕಾರನ್ನು ಎತ್ತಿ ಎಸೆಯಲು ಮುಂದಾದ ಕಾಡಾನೆ

elephant
28/11/2023

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಕ್ಕಿಂಜೆ ನೆರಿಯ ರಸ್ತೆಯಲ್ಲಿ ಓಡಾಟ ನಡೆಸಿದ ಒಂಟಿ ಸಲಗ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ  ನಡೆದಿದೆ.

ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಕಾರಿನ ಬಳಿ ಬಂದ ಕಾಡಾನೆ ಕಾರಿನ ಮೇಲೆ ದಾಳಿ ನಡೆಸಿದೆ. ಕಾರಿನ ಮುಂಭಾಗವನ್ನು ಮೇಲಕ್ಕೆತ್ತಿದೆ. ಆನೆಯ ದಾಳಿಗೆ ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಕಾರಿನಲ್ಲಿ ಆರು ಮಂದಿ ಪ್ರಯಾಣಿಕರು ಇದ್ದರು.

ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಕಜೆ ಪರಿಸರದಿಂದ ಆಗಮಿಸಿದ ಕಾಡಾನೆ ಹಳೆ‌ ಕಕ್ಕಿಂಜೆ, ಅಂತರ ಬೈಲು ಮೂಲಕ ಪೆರ್ನಾಳೆ ಅರಣ್ಯದ ಕಡೆ ಸಾಗಿದೆ. ಇಲ್ಲಿನ  ಮನೆಯ ಸಮೀಪದಿಂದಲೇ ಕಾಡಾನೆ ಸಂಚಾರ ನಡೆಸಿತ್ತು. ನಿನ್ನೆ ಸಂಜೆಯ ವೇಳೆಗೆ ಆನೆ ರಸ್ತೆಯಲ್ಲಿಯೇ ಕಾಣಿಸಿಕೊಂಡು ವಾಹನದ‌ ಮೇಲೆ‌ ದಾಳಿ ನಡೆಸಿರುವುದು ಜನರಲ್ಲಿ ಆತಂಕ ಮೂಡಿದೆ. ಅರಣ್ಯ‌ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

elephant

ಇತ್ತೀಚಿನ ಸುದ್ದಿ

Exit mobile version