ದೃಷ್ಟಿ ಕಳೆದುಕೊಂಡಿದ್ದ ಕಾಡಾನೆ ಕಾರ್ಯಾಚರಣೆ ವೇಳೆ ಸಾವು

16/12/2023
ಕೊಡಗು: ದೃಷ್ಟಿ ಕಳೆದುಕೊಂಡಿದ್ದ ಕಾಡಾನೆಯೊಂದು ಅರಣ್ಯ ಇಲಾಖೆಯ ಕಾಡಾನೆ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ ಘಟನೆ ಸೋಮವಾರಪೇಟೆ ತಾಲೂಕಿನ ಸಜ್ಜಳ್ಳಿಯಲ್ಲಿ ನಡೆದಿದೆ.
ಕಳೆದ ಕೆಲವು ತಿಂಗಳುಗಳಿಂದ ಈ ಕಾಡಾನೆ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡಿತ್ತು. ಹಾರಂಗಿ ಹಿನ್ನೀರಿನ ಪ್ರದೇಶಗಳಲ್ಲಿ ಕಾಡಾನೆ ಪತ್ತೆಯಾದ ಹಿನ್ನೆಲೆಯಲ್ಲಿ ಆನೆಯನ್ನು ಹಿಡಿದು ಶಿಬಿರಕ್ಕೆ ಸಾಗಿಸಲು ಅರಣ್ಯ ಇಲಾಖೆ ಮುಂದಾಗಿತ್ತು.
ಆನೆಯನ್ನು ಹಿಡಿಯಲು ಕಾರ್ಯಾಚರಣೆ ನಡೆಸುವ ವೇಳೆ ಆನೆ ಗುಂಡಿಗೊಂದಕ್ಕೆ ಬಿದ್ದು ತೀವ್ರ ನಿತ್ರಾಣಗೊಂಡಿತ್ತು. ಹೀಗಾಗಿ ಸ್ಥಳದಲ್ಲೇ ಇಲಾಖೆ ಆನೆಗೆ ಚಿಕಿತ್ಸೆ ನೀಡಲಾಗಿತ್ತು. ಆದ್ರ ಚಿಕಿತ್ಸೆ ಫಲಕಾರಿಯಾಗದೇ ಆನೆ ಸಾವನ್ನಪ್ಪಿದೆ.