ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಮೃತಪಟ್ಟ ವೃದ್ಧೆ! - Mahanayaka

ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಮೃತಪಟ್ಟ ವೃದ್ಧೆ!

yashodha
17/04/2024

ಉಡುಪಿ: ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ.

ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಮೃತಪಟ್ಟವರು. ಹಿರಿಯ ನಾಗರಿಕರ ಕಾರ್ಯಕ್ರಮದಡಿಯಲ್ಲಿ ಇವರು ಮತದಾನ ಮಾಡಿದ್ದರು. ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಮತದಾನಕ್ಕೂ ಮೊದಲೇ ವೃದ್ಧೆಗೆ ಎದೆನೋವು ಕಾಣಿಸಿಕೊಂಡಿತ್ತು. ಆದರೆ, ಓಟು ಮಾಡಿದ ನಂತರ ಆಸ್ಪತ್ರೆಗೆ ಹೋಗೋಣ ಎಂದು ಅವರು ಹೇಳಿದ್ದರಂತೆ, ಅದರಂತೆ ಓಟು ಮಾಡಿದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ