ಅಪಘಾತ ನಡೆಸಿ ಪರಾರಿಯಾದ ಅಪರಿಚಿತ ವಾಹನ: ವ್ಯಕ್ತಿಯ ಮೃತದೇಹ ಛಿದ್ರ ಛಿದ್ರ!

05/02/2024
ಚಿಕ್ಕಬಳ್ಳಾಪುರ: ಭೀಕರ ಅಪಘಾತವೊಂದರಲ್ಲಿ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.
ಕಲಬುರ್ಗಿ ಜಿಲ್ಲೆ ಮೂಲದ ಲಕ್ಷ್ಮಣ (45) ಮೃತಪಟ್ಟವರು ಎಂದು ಹೇಳಲಾಗಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಹಾರೋಬಂಡೆ ಕ್ರಾಸ್ ಬಳಿ ಅಪರಿಚಿತ ವಾಹನ ಅಪಘಾತ ನಡೆಸಿ ಪರಾರಿಯಾಗಿದೆ. ಡಿಕ್ಕಿ ಹೊಡೆದ ವಾಹನ ವ್ಯಕ್ತಿಯ ಮೇಲೆಯೇ ಹರಿದಿದ್ದು, ಪರಿಣಾಮವಾಗಿ ವ್ಯಕ್ತಿಯ ದೇಹ ಛಿದ್ರ ಛಿದ್ರವಾಗಿದೆ.
ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತ ನಡೆಸಿ ಪರಾರಿಯಾಗಿರುವ ಅಪರಿಚಿತ ವಾಹನದ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.