ಅನಂತ್ ಕುಮಾರ್ ಹೆಗಡೆ ಗೇಟ್ ಬಳಿ ಅರ್ಧಗಂಟೆ ಕಾದು ವಾಪಸ್ ತೆರಳಿದ ವಿಶ್ವೇಶ್ವರ ಹೆಗಡೆ ಕಾಗೇರಿ: ಸೌಜನ್ಯಕ್ಕೂ ತೆರೆಯಲಿಲ್ಲ ಗೇಟ್! - Mahanayaka

ಅನಂತ್ ಕುಮಾರ್ ಹೆಗಡೆ ಗೇಟ್ ಬಳಿ ಅರ್ಧಗಂಟೆ ಕಾದು ವಾಪಸ್ ತೆರಳಿದ ವಿಶ್ವೇಶ್ವರ ಹೆಗಡೆ ಕಾಗೇರಿ: ಸೌಜನ್ಯಕ್ಕೂ ತೆರೆಯಲಿಲ್ಲ ಗೇಟ್!

kagere
28/03/2024


Provided by

ಕಾರವಾರ: ಲೋಕಸಭಾ ಚುನಾವಣೆಗೆ ಉತ್ತರ ಕನ್ನಡ ಕ್ಷೇತ್ರದಿಂದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಟಿಕೆಟ್ ಪಡೆದುಕೊಂಡಿದ್ದಾರೆ. ಟಿಕೆಟ್ ಪಡೆದ ಬೆನ್ನಲ್ಲೇ ಇದೀಗ ಜಿಲ್ಲೆಯ ಶಾಸಕರು ಹಾಗೂ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಯ ಬೆಂಬಲ ಸಿಗದೇ ಕಾಗೇರಿ ಕಂಗಾಲಾಗಿದ್ದಾರೆ ಎನ್ನಲಾಗಿದೆ.

ಶಾಸಕರು ಹಾಗೂ ಸಂಸದರು ವಿಶ್ವೇಶ್ವರ ಹೆಗಡೆ ಕಾಗೇರಿಯನ್ನು ಮನೆಯ ಗೇಟ್ ನಿಂದ ಒಳಗೆ ಬಿಡದೇ ಅವಮಾನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೊಂದೆಡೆ ಉತ್ತರ ಕನ್ನಡದಲ್ಲಿ ಈ ಬಾರಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎನ್ನುವ ಮಾತುಗಳು ಕೂಡ ಕೇಳಿ ಬಂದಿದೆ.

ದೇಶಕ್ಕಾಗಿ, ಮೋದಿಗಾಗಿ ಎಂದು ಡೈಲಾಗ್ ಹೊಡೆಯುತ್ತಿದ್ದ ಅನಂತ್ ಕುಮಾರ್ ಹೆಗಡೆ, ಟಿಕೆಟ್ ಕೈ ತಪ್ಪುವ ಸೂಚನೆ ಸಿಕ್ಕಿದ ಬಳಿಕ ಕಾರ್ಯಕರ್ತರಿಗೂ ಸಂಪರ್ಕಕ್ಕೆ ಸಿಗದೇ ಮೌನವಾಗಿದ್ದಾರೆ. ಅತ್ತ ಟಿಕೆಟ್ ಸಿಕ್ಕ ಖುಷಿಯಲ್ಲಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ನಾಯಕರು ಹಾಗೂ ಕಾರ್ಯಕರ್ತರ ಬೆಂಬಲವಿಲ್ಲದೇ ಕಂಗಾಲಾಗಿದ್ದಾರೆ.

ವರದಿಗಳ ಪ್ರಕಾರ, ಅನಂತ್ ಕುಮಾರ್ ಹೆಗಡೆ ಮನೆಗೆ ತೆರಳಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ, ಗೇಟ್ ಬಳಿ ಸುಮಾರು ಅರ್ಧ ಗಂಟೆಗಳ ಕಾಲ ಕಾದರೂ, ಅವರನ್ನು ಗೇಟ್ ನಿಂದ ಒಳಗೆ ಸೌಜನ್ಯಕ್ಕೂ ಬಿಟ್ಟಿಲ್ಲ, ಮಾತನಾಡಿಸಿಲ್ಲ ಎಂದು ಹೇಳಲಾಗಿದೆ.

ಇನ್ನೊಂದೆಡೆ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಓಡಾಡುತ್ತಿದ್ದು, ಕಾಗೇರಿ ಕೈಗೆ ಸಿಗುತ್ತಿಲ್ಲ ಎನ್ನಲಾಗಿದೆ. ಉತ್ತರ ಕನ್ನಡದಲ್ಲಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ತೀವ್ರಗೊಂದಲ ಸೃಷ್ಟಿಯಾಗಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ