ದರ್ಪ: ತನ್ನನ್ನು ಕಾಯುವಂತೆ ಮಾಡಿದ ಪೊಲೀಸ್ ಅಧಿಕಾರಿಯನ್ನು ಗದರಿಸಿದ ಆಂಧ್ರ ಸಚಿವರ ಪತ್ನಿ

02/07/2024

ಆಂಧ್ರಪ್ರದೇಶದ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ಅವರ ಪತ್ನಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಪೊಲೀಸ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್ ಆಗಿದೆ.

ಹರಿತಾ ರೆಡ್ಡಿ ಸ್ಥಳೀಯ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಅನ್ನಮಯ್ಯ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಾರಿನ ಪ್ಯಾಸೆಂಜರ್ ಸೀಟಿನಲ್ಲಿ ಕುಳಿತು30 ನಿಮಿಷಗಳ ಕಾಲ ಕಾಯಬೇಕಾಗಿ ಬಂದಿತ್ತು. ಹೀಗಾಗಿ ರಮೇಶ್ ಎಂಬ ಸಬ್ ಇನ್ಸ್ ಪೆಕ್ಟರ್ ಅವರನ್ನು ಬೈಯುವುದನ್ನು ವೀಡಿಯೊ ತೋರಿಸುತ್ತದೆ.

ಮಹಿಳೆಯು ಪೊಲೀಸ್ ಅಧಿಕಾರಿಯ ಮೇಲೆ ಹಲವಾರು ಪ್ರಶ್ನೆಗಳನ್ನು ಕೇಳುವ ಮೂಲಕ ಮತ್ತು ತಮ್ಮಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಈಗ ಬೆಳಿಗ್ಗೆ ಅಲ್ಲವೇ..? ನೀವು ಯಾವ ಅರ್ಹತೆಯನ್ನು ಹೊಂದಿದ್ದೀರಿ..? ನೀವು ಮದುವೆಗೆ ಬಂದಿದ್ದೀರಾ ಅಥವಾ ಕರ್ತವ್ಯಕ್ಕಾಗಿ ಬಂದಿದ್ದೀರಾ? ನಿಮಗಾಗಿ ಅರ್ಧ ಗಂಟೆ ಕಾಯುತ್ತಿದ್ದೆ. ನಿಮ್ಮ ಸಂಬಳವನ್ನು ಯಾರು ಪಾವತಿಸುತ್ತಾರೆ? ಸರ್ಕಾರ ಅಥವಾ ವೈಎಸ್ಆರ್ಸಿಪಿ?” ಎಂದು ಅವರು ಅಲ್ಲಿ ನಿಂತಿದ್ದ ಪೊಲೀಸ್ ಅಧಿಕಾರಿಯನ್ನು ಗದರಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version