ಶವದ ಪಕ್ಕ ಕುಳಿತು ಅಶ್ಲೀಲ ವಿಡಿಯೋ ವೀಕ್ಷಿಸಿದ ಪತ್ನಿ: ಬಿರಿಯಾನಿಯಲ್ಲಿ ನಿದ್ರೆ ಮಾತ್ರೆ ಹಾಕಿ ಪತಿಯನ್ನೇ ಕೊಂದ ಕಿರಾತಕಿ!
ಗುಂಟೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿಯೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಶವದ ಪಕ್ಕದಲ್ಲೇ ಕುಳಿತು ಇಡೀ ರಾತ್ರಿ ಅಶ್ಲೀಲ ವಿಡಿಯೋಗಳನ್ನು (Porn videos) ವೀಕ್ಷಿಸಿರುವುದು ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ.
ಏನಿದು ಘಟನೆ? ಗುಂಟೂರಿನ ಚಿಲುವೂರು ಗ್ರಾಮದ ಲೋಕಂ ಶಿವನಾಗರಾಜು ಎಂಬುವವರ ಪತ್ನಿ ಲಕ್ಷ್ಮಿ ಮಾಧುರಿ, ಗೋಪಿ ಎಂಬ ಯುವಕನ ಜೊತೆ ವಿವಾಹೇತರ ಸಂಬಂಧ ಹೊಂದಿದ್ದಳು. ಈ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಮುಗಿಸಲು ಇಬ್ಬರೂ ಸೇರಿ ಭೀಕರ ಸಂಚು ರೂಪಿಸಿದ್ದರು.
ಸಂಚು ಮಾಡಿದ್ದು ಹೇಗೆ? ಘಟನೆಯ ದಿನ ಪತ್ನಿ ಮಾಧುರಿ ತನ್ನ ಪತಿಗಾಗಿ ಬಿರಿಯಾನಿ ತಯಾರಿಸಿದ್ದಳು. ಆ ಬಿರಿಯಾನಿಯಲ್ಲಿ ನಿದ್ರೆ ಮಾತ್ರೆಗಳ ಪುಡಿಯನ್ನು ಬೆರೆಸಿದ್ದಳು. ಊಟ ಮಾಡಿದ ಶಿವನಾಗರಾಜು ಗಾಢ ನಿದ್ರೆಗೆ ಜಾರುತ್ತಿದ್ದಂತೆ ಮಾಧುರಿ ತನ್ನ ಪ್ರಿಯಕರ ಗೋಪಿಯನ್ನು ಮನೆಗೆ ಕರೆಸಿಕೊಂಡಿದ್ದಾಳೆ. ಇಬ್ಬರೂ ಸೇರಿ ನಿದ್ರೆಯಲ್ಲಿದ್ದ ಶಿವನಾಗರಾಜು ಅವರ ಮುಖದ ಮೇಲೆ ದಿಂಬು ಒತ್ತಿ ಹಿಡಿದು ಉಸಿರುಗಟ್ಟಿಸಿ ಸಾಯಿಸಿದ್ದಾರೆ.
ಇಡೀ ರಾತ್ರಿ ಅಶ್ಲೀಲ ವಿಡಿಯೋ ವೀಕ್ಷಣೆ: ಪತಿಯನ್ನು ಕೊಂದ ನಂತರ ಆರೋಪಿ ಮಾಧುರಿ ಯಾವುದೇ ಭಯವಿಲ್ಲದೆ ಪತಿಯ ಶವದ ಪಕ್ಕದಲ್ಲೇ ಕುಳಿತು ಮೊಬೈಲ್‌ನಲ್ಲಿ ಇಡೀ ರಾತ್ರಿ ಅಶ್ಲೀಲ ವಿಡಿಯೋಗಳನ್ನು ವೀಕ್ಷಿಸಿದ್ದಾಳೆ ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಬೆಳಿಗ್ಗೆ ಏನೂ ಅರಿಯದವಳಂತೆ ನೆರೆಹೊರೆಯವರ ಬಳಿ ಹೋಗಿ ತನ್ನ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ನಾಟಕವಾಡಿದ್ದಾಳೆ.
ಪೊಲೀಸ್ ತನಿಖೆಯಲ್ಲಿ ಸತ್ಯ ಬಯಲು: ಶವದ ಮೇಲೆ ರಕ್ತದ ಕಲೆಗಳು ಮತ್ತು ಗಾಯದ ಗುರುತುಗಳನ್ನು ಕಂಡು ಶಿವನಾಗರಾಜು ತಂದೆ ಮತ್ತು ಸ್ನೇಹಿತರಿಗೆ ಅನುಮಾನ ಬಂದಿದೆ. ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿದಾಗ ಇದು ಕೊಲೆ ಎಂಬುದು ಖಚಿತವಾಗಿದೆ. ನಂತರ ಪೊಲೀಸರು ಮಾಧುರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆಕೆಯ ಮೊಬೈಲ್ ಹಿಸ್ಟರಿಯನ್ನು ಪರಿಶೀಲಿಸಿದಾಗ ಸತ್ಯ ಹೊರಬಿದ್ದಿದೆ. ಮಾಧುರಿ ಮತ್ತು ಆಕೆಯ ಪ್ರಿಯಕರ ಗೋಪಿ ಇಬ್ಬರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























