ಅಂಗಡಿಯ ಬಾಗಿಲು‌ ಮುರಿದು ಲಕ್ಷಾಂತರ ರೂ. ಮೌಲ್ಯದ ಮೊಬೈಲ್ ಕಳವು - Mahanayaka

ಅಂಗಡಿಯ ಬಾಗಿಲು‌ ಮುರಿದು ಲಕ್ಷಾಂತರ ರೂ. ಮೌಲ್ಯದ ಮೊಬೈಲ್ ಕಳವು

mobile
25/09/2022

ಮಲ್ಪೆ: ಮೊಬೈಲ್ ಅಂಗಡಿಯ ಬಾಗಿಲು‌ ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಲಕ್ಷಾಂತರ ರೂ. ಮೌಲ್ಯದ ಮೊಬೈಲ್ ಗಳನ್ನು ಕಳವು ಮಾಡಿಕೊಂಡು ಪರಾರಿಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ.

ಕಳ್ಳನು ಕಳ್ಳತನ ಮಾಡುವ ದೃಶ್ಯ ಅಂಗಡಿಯಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ.  ಬೆಲೆಬಾಳುವ 7 ಮೊಬೈಲ್ ಗಳನ್ನು ಕಳ್ಳತನ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಕಳ್ಳನು ಮುಖ ಚಹರೆ ಮರೆಮಾಚಲು ರೈನ್ ಕೋಟ್ ಧರಿಸಿದ್ದನು ಎನ್ನಲಾಗಿದೆ. ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ