ಬೆಂಗಳೂರು ಬಂದ್ ಎಫೆಕ್ಟ್: ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ ಅನಿಲ್ ಕುಂಬ್ಳೆ

11/09/2023
ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟ ಇಂದು ಕರೆ ನೀಡಿದ್ದ ಬಂದ್ ಎಫೆಕ್ಟ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಅಲ್ಲಿಂದ ಆಗಮಿಸುವ ಪ್ರಯಾಣಿಕರಿಗೂ ತಟ್ಟಿತು.
ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಕೂಡಾ ಟ್ಯಾಕ್ಸಿ ಇಲ್ಲದ ಕಾರಣ ವಿಮಾನ ನಿಲ್ದಾಣದಿಂದ ಬಿಎಂಟಿಸಿ ವಾಯುವಜ್ರ ಬಸ್ ನಲ್ಲಿ ಪ್ರಯಾಣಿಸಿದ ಘಟನೆ ನಡೆಯಿತು.
ಈ ಬಗ್ಗೆ ಫೋಟೋವೊಂದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಅವರು ಹಂಚಿಕೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಮನೆಗೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣ ಎಂದು ಅವರು ಬರೆದುಕೊಂಡಿದ್ದಾರೆ.