ಸಣ್ಣ ಮಕ್ಕಳೊಳಗಿನ ವೈಮನಸ್ಸಿನ ವಿಚಾರಕ್ಕೆ ದೊಡ್ಡವರ ಗಲಾಟೆ: ಓರ್ವನ ಬರ್ಬರ ಹತ್ಯೆ
ಕ್ಷುಲ್ಲಕ ವಿಚಾರವಾಗಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆ ಎಂಬಲ್ಲಿ ನಡೆದಿದೆ.
ಮೃತರನ್ನು ಜಮಾಲ್ ಎಂದು ಗುರುತಿಸಲಾಗಿದೆ. ಮೃತರ ತಂಗಿಯ ಗಂಡ, ಚಿಕ್ಕಮಗಳೂರು ಮೂಲದ ಸುಹೈಬ್ ಕೊಲೆ ಆರೋಪಿಯಾಗಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಇವರಿಬ್ಬರ ಮನೆಗಳು ಅಕ್ಕಪಕ್ಕದಲ್ಲಿದ್ದು ಸಣ್ಣ ಮಕ್ಕಳೊಳಗಿನ ವೈಮನಸ್ಸಿನ ವಿಚಾರವಾಗಿ ಇಂದು ಬೆಳಗ್ಗೆ ಜಮಾಲ್ ಮತ್ತು ಸುಹೈಬ್ ನಡುವೆ ಮಾತಿಕ ಚಕಮಕಿ ನಡೆದಿದೆ. ಇದು ತಾರಕಕ್ಕೇರಿದಾಗ ಜಮಾಲ್ ಹೊಟ್ಟೆಗೆ ಆರೋಪಿ ಸುಹೈಬ್ ಚಾಕುವಿನಿಂದ ಇರಿದಿದ್ದಾನೆ ಎಂದು ಹೇಳಲಾಗಿದೆ.
ಇದರಿಂದ ಗಂಭೀರ ಗಾಯಗೊಂಡ ಸುಹೈಬ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಮೂಡುಬಿದಿರೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























