ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ ಮಾಡುತ್ತೇವೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ - Mahanayaka

ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ ಮಾಡುತ್ತೇವೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

g parameshwar
20/05/2024


Provided by

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ತಿಳಿಸಿದ್ದಾರೆ.

ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಎರಡು ಕೊಲೆಗಳು ನಡೆದಿರುವುದು ದುರದೃಷ್ಟಕರ. ಅಂಜಲಿ ಕೊಲೆ ಆರೋಪಿ ಗಿರೀಶ್ ಪೊಲೀಸರ ವಶದಲ್ಲಿದ್ದು, ತನಿಖೆ ನಡೆಯುತ್ತಿದೆ ಎಂದರು.

ಆರೋಪಿಗೆ ಶಿಕ್ಷೆ ಆಗಬೇಕು. ಹೀಗಾಗಿ ಪೊಲೀಸ್ ಇಲಾಖೆ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ. ಇನ್ನು ಈ ಪ್ರಕರಣವನ್ನು ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಹಸ್ತಾಂತರ ಮಾಡುತ್ತೇವೆ ಎಂದು ಹೇಳಿದರು.

ನೇಹಾದಂತೆ ಅಂಜಲಿ ಕೊಲೆ ಕೂಡ ಗಂಭೀರ ಪ್ರಕರಣ. ಕೊಲೆಯಾದ ಅಂಜಲಿ ಅಂಬಿಗೇರ ಕುಟುಂಬ ಕಡುಬಡತನದಲ್ಲಿದೆ. ಬೆಂಗಳೂರಲ್ಲಿ ಇದ್ದುಕೊಂಡೇ 2 ಕೊಲೆ ಕೇಸ್ ಮಾಹಿತಿ ಪಡೆಯುತ್ತಿದ್ದೆ. ಮಾನವೀಯತೆ ದೃಷ್ಟಿಯಿಂದ 2 ಕುಟುಂಬಗಳನ್ನು ಭೇಟಿ ಮಾಡಿದ್ದೇನೆ ಎಂದು ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068

ಇತ್ತೀಚಿನ ಸುದ್ದಿ