11:20 PM Saturday 6 - December 2025

ಮನೆಯಲ್ಲಿ ಅನ್ನಭಾಗ್ಯದ ಅಕ್ಕಿ ಅಕ್ರಮ ದಾಸ್ತಾನು: 10 ಕ್ವಿಂಟಾಲ್  ಅಕ್ಕಿ ವಶ

anna bhagya rice
27/08/2022

ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ಮನೆಯೊಂದಕ್ಕೆ ಆ.26ರಂದು ದಾಳಿ ನಡೆಸಿದ ಆಹಾರ ಇಲಾಖೆಯ ಅಧಿಕಾರಿಗಳು 22 ಸಾವಿರ ಮೌಲ್ಯದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಗಂಗೊಳ್ಳಿ ಬರ್‌’ಗೇರಿ ನಿವಾಸಿ ಗಣೇಶ ಶೇರಿಗಾರ‌ ಎಂಬವರ ಮನೆಯಲ್ಲಿ ಪಡಿತರ ಅಕ್ಕಿಯನ್ನು ಕಾನೂನು ಬಾಹಿರವಾಗಿ ದಾಸ್ತಾನು ಇರಿಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮನೆಯಲ್ಲಿ 10 ಕ್ವಿಂಟಾಲ್ ಕೊಚ್ಚಿಗೆ ಅಕ್ಕಿ ಇರುವುದು ಕಂಡುಬಂದಿದೆ. ಸ್ವಾಧೀನಪಡಿಸಿಕೊಂಡ ಅಕ್ಕಿಯ ಮೌಲ್ಯ 22, ಸಾವಿರ ರೂಪಾಯಿ ಆಗಿದೆ.. ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version