ತಮಿಳುನಾಡಿನಲ್ಲಿ ಸ್ಪರ್ಧಿಸಿದ್ದ ಅಣ್ಣಾಮಲೈ ಫಲಿತಾಂಶ ಏನಾಗಿದೆ ಗೊತ್ತಾ? - Mahanayaka

ತಮಿಳುನಾಡಿನಲ್ಲಿ ಸ್ಪರ್ಧಿಸಿದ್ದ ಅಣ್ಣಾಮಲೈ ಫಲಿತಾಂಶ ಏನಾಗಿದೆ ಗೊತ್ತಾ?

annamalai
02/05/2021

ಚೆನ್ನೈ:  ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ತಮಿಳುನಾಡು ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಆರಂಭಿಕ ಹಂತದಲ್ಲಿ ಅವರ ತೀವ್ರ ಹಿನ್ನಡೆ ಅನುಭವಿಸಿದ್ದಾರೆ.

ಅಣ್ಣಾಮಲೈಗೆ ಇದು ಮೊದಲ ಚುನಾವಣೆಯಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಆ ಬಳಿಕ ಬಿಜೆಪಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು.

ತಮ್ಮ ಮೊದಲ ಚುನಾವಣೆಯಲ್ಲಿ ಅವರು ಸ್ವಕ್ಷೇತ್ರವಾಗಿರುವ ತಮಿಳುನಾಡಿನ ಅರವಕುರುಚ್ಚಿಯಿಂದ ಸ್ಪರ್ಧಿಸಿದ್ದರು. ಆದರೆ ಆರಂಭಿಕ ಹಂತದ ಮತ ಎಣಿಕೆಯ ವೇಳೆ ಅವರು ತೀವ್ರ ಹಿನ್ನಡೆ ಅನುಭವಿಸಿದ್ದು, ಇವರ ವಿರುದ್ಧ ಸ್ಪರ್ಧಿಸಿದ್ದ ಎಲಂಗೋ ಮುನ್ನಡೆ ಸಾಧಿಸಿದ್ದಾರೆ.

ಇತ್ತೀಚಿನ ಸುದ್ದಿ