ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ: ಅಣ್ಣಾಮಲೈ ರಾಜೀನಾಮೆಗೆ ಕಾರಣ ಏನು? - Mahanayaka

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ: ಅಣ್ಣಾಮಲೈ ರಾಜೀನಾಮೆಗೆ ಕಾರಣ ಏನು?

annamalai
04/04/2025


Provided by

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ಅವರು ರಾಜೀನಾಮೆ ಘೋಷಿಸಿದ್ದಾರೆ. ಕಳೆದ ವಾರವಷ್ಟೇ ಅಣ್ಣಾಮಲೈ ರಾಜೀನಾಮೆ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಿದ್ದವು, ಅಂತಿಮವಾಗಿ ಹೈಕಮಾಂಡ್ ನಿರ್ದೇನದಂತೆ ರಾಜ್ಯಾಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಕೆಳಗಿಳಿದಿದ್ದಾರೆ.

ರಾಜೀನಾಮೆಯ ನಂತರ ಕೊಯಮತ್ತೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ನಾನು ಸ್ಪರ್ಧೆ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಬಿಜೆಪಿ ರಾಜ್ಯಾಧ್ಯಕ್ಷ ರೇಸ್ ನಲ್ಲಿ ಇಲ್ಲ, ನಾವೆಲ್ಲರೂ ಸೇರಿ ನೂತನ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ, ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ಕೊಡೋದಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

2023ರಲ್ಲಿ ಎಐಡಿಎಂಕೆ ಮತ್ತು ಬಿಜೆಪಿ ವಿಭಜನೆಯಾಗಲು ಅಣ್ಣಾಮಲೈ ಕಾರಣ ಎನ್ನಲಾಗಿತ್ತು.  ಇದೀಗ ಮತ್ತೆ ಈ ಎರಡು ಪಕ್ಷಗಳ ನಡುವೆ ಮೈತ್ರಿ ಮಾತುಕತೆಗಳು ಆರಂಭವಾಗಿವೆ. ಈ ನಡುವೆ ಎಐಡಿಎಂಕೆ ನಾಯಕರು ಅಣ್ಣಾಮಲೈ ಅವರ ನಾಯಕತ್ವವನ್ನು ತೀವ್ರವಾಗಿ ವಿರೋಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಬೇಕಾದರೆ, ಅಣ್ಣಾಮಲೈ ಅವರ ಬದಲಾವಣೆಯನ್ನ ಎಐಡಿಎಂಕೆ ನಾಯಕರು ಕೋರಿರುವ ಹಿನ್ನೆಲೆ ಅನಿವಾರ್ಯವಾಗಿ ಅಣ್ಣಾಮಲೈ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ದೆಹಲಿಯಲ್ಲಿ ಅಮಿತ್ ಶಾ ಜೊತೆಗೆ ನಡೆದ ಸಭೆಯಲ್ಲಿ ಅಣ್ಣಾಮಲೈ ಅವರು ರಾಜೀನಾಮೆ ನೀಡಬೇಕು ಎನ್ನುವ ಬಿಜೆಪಿ ನಾಯಕರ ನಿರ್ಧಾರವನ್ನು ತಿಳಿಸಲಾಗಿತ್ತು ಎಂದು ಹೇಳಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ