9:49 AM Thursday 29 - January 2026

ಮತ್ತೋರ್ವ ಬಿಜೆಪಿ ನಾಯಕನ ‘ಆ’ ವಿಡಿಯೋ ಲೀಕ್: ವ್ಯಾಪಕ ಆಕ್ರೋಶ

mumdai
19/07/2023

ಮುಂಬೈ: ಭಾರತೀಯ ಜನತಾ ಪಾರ್ಟಿ(BJP)ಯ ಮಾಜಿ ಸಂಸದ ಕಿರಿಟ್ ಸೋಮಯ್ಯ ಎಂಬವರ ಅಶ್ಲೀಲ ವಿಡಿಯೋವೊಂದು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದು, ಈ ವಿಡಿಯೋ ಇದೀಗ ಕಿಡಿಹತ್ತಿಸಿದೆ.

ಮಹಾರಾಷ್ಟ್ರ ಬಿಜೆಪಿಯ ರಾಜ್ಯ ಉಪಾಧ್ಯಕ್ಷರೂ ಆಗಿರುವ ಕಿರಿಟ್ ಸೋಮಯ್ಯ ಅಸಭ್ಯ ಭಂಗಿಯಲ್ಲಿ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದು, ಮಾರಾಠಿ ವಾಹಿನಿಯೊಂದು ವಿಡಿಯೋವನ್ನು ಪ್ರಸಾರ ಮಾಡಿದ ಬಳಿಕ ಈ ವಿಡಿಯೋ ಮಹಾರಾಷ್ಟ್ರ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದೆ.

ಈ ವಿಡಿಯೋ ಕಿರಿಟ್ ಸೋಮಯ್ಯನವರದ್ದೇ ಎಂದು ವಿರೋಧ ಪಕ್ಷಗಳು ಹೇಳುತ್ತಿದ್ದರೆ, ಇದು ತಿರುಚಿದ ವಿಡಿಯೋ ಎಂದು ಕಿರಿಟ್ ವಾದಿಸಿದ್ದು, ಚಾನೆಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಈ ವಿಡಿಯೋವನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಕಿರಿಟ್ ಸೋಮಯ್ಯ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೂಡ ಮಾಡಿದ್ದಾರೆ. ಸಂತ್ರಸ್ತೆಯನ್ನು ಪತ್ತೆ ಹಚ್ಚಿ ತಕ್ಷಣವೇ ಕಿರಿಟ್ ಸೋಮಯ್ಯ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

ಮಹಿಳೆಯ ಜೊತೆಗೆ ಕಿರಿಟ್ ಸೋಮಯ್ಯ ಅಶ್ಲೀಲವಾಗಿ ಮಾತನಾಡುತ್ತಾ, ಅಸಹ್ಯವಾದ ಹಾವಭಾವಗಳನ್ನು ತೋರಿಸುತ್ತಾ, ಬೆತ್ತಲೆ ದೇಹ ಪ್ರದರ್ಶಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

https://twitter.com/aestheticayush6/status/1681023999638409216?s=20

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version