3:47 AM Wednesday 3 - September 2025

ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು: ಇದೇ ಜಾಗದಲ್ಲಿ ನಿನ್ನೆಯೂ ಬಿದ್ದಿತ್ತು ಕಾರು

hemavathi
29/06/2024

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದ್ದು, ಮಳೆಯಿಂದ ರಸ್ತೆ ಕಾಣದೇ ಹೇಮಾವತಿ ನದಿಗೆ ಕಾರೊಂದು ಬಿದ್ದ ಘಟನೆಯ ಬೆನ್ನಲ್ಲೇ ಇದೀಗ ಮತ್ತೊಂದು ಕಾರು ಅದೇ ಜಾಗದಲ್ಲಿ ನದಿಗೆ ಬಿದ್ದಿದೆ.

ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಇದೀಗ ಬಿದ್ದ ಆಲ್ಟೋ ಕಾರು ನದಿಗೆ ಬಿದ್ದಿದೆ. ನಿನ್ನೆ ಇದೇ ಜಾಗದಲ್ಲಿ ಇದೇ ರೀತಿಯಲ್ಲಿ ಸ್ವಿಫ್ಟ್ ಕಾರೊಂದು ನದಿಗೆ ಬಿದ್ದಿತ್ತು. ಇಂದು ಆಲ್ಟೋ ಕಾರು ಬಿದ್ದಿದೆ.

ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣ–ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳ್ತಂಗಡಿಯಿಂದ ಮೂಡಿಗೆರೆಗೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆ ಹಾರಿ ನದಿಗೆ ಬಿದ್ದಿದೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

]

 

ಇತ್ತೀಚಿನ ಸುದ್ದಿ

Exit mobile version