ಉತ್ತರ ಪ್ರದೇಶದಲ್ಲಿ ಮತ್ತೊಂದು ಎನ್ ಕೌಂಟರ್: ಗ್ಯಾಂಗ್ ಸ್ಟಾರ್ ಅನಿಲ್ ದುಜಾನಾ ಹತ್ಯೆ
ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಗ್ಯಾಂಗ್ ಸ್ಟಾರ್ ಅನಿಲ್ ದುಜಾನಾನನ್ನು ಎನ್ ಕೌಂಟರ್ ನಲ್ಲಿ ಗುರುವಾರ ಮಧ್ಯಾಹ್ನ ಹತ್ಯೆ ಮಾಡಿದೆ. ಗೌತಮ್ ಬುದ್ಧ ನಗರ ಜಿಲ್ಲೆಯ ಬಾದಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದುಜಾನಾ ಗ್ರಾಮದ ನಿವಾಸಿ.
ದುಜಾನಾ ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಸಂಘಟಿತ ಕ್ರಿಮಿನಲ್ ಗ್ಯಾಂಗ್ ಅನ್ನು ನಡೆಸುತ್ತಿದ್ದ. ಅನಿಲ್ ವಿರುದ್ಧ 18 ಕೊಲೆಗಳು, ಸುಲಿಗೆ, ದರೋಡೆ, ಭೂಹಗರಣ, ಉಚ್ಚಾಟನೆ ಸೇರಿದಂತೆ 62 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಉತ್ತರ ಪ್ರದೇಶದಲ್ಲಿ ಮಾಫಿಯಾ ಮತ್ತು ಗ್ಯಾಂಗ್ಸ್ಟರ್ಗಳ ವಿರುದ್ಧದ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ಅನಿಲ್ ದುಜಾನಾ ಎನ್ಕೌಂಟರ್ ನಡೆದಿದೆ.
ಝಾನ್ಸಿಯಲ್ಲಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಹತ್ಯೆಯ ನಂತರ ಯುಪಿ ಎಸ್ಟಿಎಫ್ ಎನ್ಕೌಂಟರ್ನಲ್ಲಿ ನಡೆಸಿದ ಎರಡನೇ ಹೈ ಪ್ರೊಫೈಲ್ ಹತ್ಯೆ ಇದಾಗಿದೆ. ಉಮೇಶ್ ಪಾಲ್ ಹತ್ಯೆಯಲ್ಲಿ ಅಸದ್ ವಾಂಟೆಂಡ್ ವ್ಯಕ್ತಿಯಾಗಿದ್ದ. ಈತನ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆ, ಗೂಂಡಾ ಕಾಯಿದೆ ಸೇರಿದಂತೆ ಹಲವು ಆರೋಪಗಳಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























