ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ!
ಮೈಸೂರು: ಹುಲಿ ದಾಳಿಗೆ ಮೈಸೂರು ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ಸರಗೂರು ತಾಲೂಕಿನ ಕುರ್ಣೇಗಾಲ ಬಳಿ ಈ ಘಟನೆ ನಡೆದಿದೆ.
ನಿಂಗಯ್ಯ(65) ಹುಲಿ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದಾರೆ. ಕಾಡಂಚಿನ ಜಮೀನಿನಲ್ಲಿ ಹಸುವನ್ನು ಮೇಯಿಸಲು ಹೋಗಿದ್ದ ವೇಳೆ ಹುಲಿ ದಾಳಿ ನಡೆಸಿ ರೈತನನ್ನು ಕೊಂದು ಹಾಕಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ.
ಇತ್ತೀಚೆಗೆ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ರಾಜಶೇಖರ್ ಎಂಬ ರೈತ ಹುಲಿ ದಾಳಿಗೆ ಬಲಿಯಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಘಟನೆ ನಡೆದಿದೆ.
ರಾಜಶೇಖರ್ ಹುಲಿ ದಾಳಿಗೆ ಬಲಿಯಾದ ನಂತರ ಸಾರ್ವಜನಿಕರು ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ನಂತರ ಸಾಕಾನೆಗಳಾದ ಭೀಮ, ಮಹೇಂದ್ರನನ್ನು ಬಳಸಿಕೊಂಡು ಯಡಿಯಾಲ ಅರಣ್ಯ ವಲಯದ ಅಂಜನಾಪುರದ ಬಳಿ ಅರವಳಿಕೆ ತಜ್ಞ ಶೂಟರ್‌ಗಳ ಸಹಾಯದಿಂದ ಸುಮಾರು 7 ವರ್ಷದ ಹೆಣ್ಣು ಹುಲಿಯನ್ನು ಸೆರೆ ಹಿಡಿಯಲಾಗಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























