ಮತ್ತೆ ಕಾಡ್ಗಿಚ್ಚು: ಹೊರನಾಡು ಸಮೀಪದ ಬಲಿಗೆ- ಮಾವಿನಹೊಲ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು - Mahanayaka

ಮತ್ತೆ ಕಾಡ್ಗಿಚ್ಚು: ಹೊರನಾಡು ಸಮೀಪದ ಬಲಿಗೆ– ಮಾವಿನಹೊಲ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು

26/02/2025


Provided by

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಸಮೀಪದ ಬಲಿಗೆ ಮತ್ತು ಮಾವಿನಹೊಲ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಸಂಭವಿಸಿದೆ. ಈ ಬೆಂಕಿಯಿಂದ ಹತ್ತಾರು ಎಕರೆ ಅರಣ್ಯ ಸಂಪತ್ತು ಸುಟ್ಟು ಕರಕಲಾಗಿದೆ. ಗುಡ್ಡ ಪ್ರದೇಶದಲ್ಲಿ ಬೆಂಕಿ ಹಬ್ಬಿದ ಪರಿಣಾಮ, ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಗ್ನಿಶಾಮಕ ವಾಹನಗಳು ಹೋಗಲು ಸಾಧ್ಯವಿಲ್ಲದ ಸ್ಥಳಗಳಲ್ಲಿ, ಸೊಪ್ಪು ಮತ್ತು ಇತರ ಸಾದ್ಯವಾದ ಸಾಧನಗಳನ್ನು ಬಳಸಿಕೊಂಡು ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ.


Provided by

ಇತ್ತೀಚಿನ ದಿನಗಳಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಮತ್ತು ಕೆಮ್ಮಣ್ಣುಗುಂಡಿ ಪ್ರದೇಶಗಳಲ್ಲಿಯೂ ಕಾಡ್ಗಿಚ್ಚು ಸಂಭವಿಸಿದ್ದು, ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ. ಮುಳ್ಳಯ್ಯನಗಿರಿ ಗುಡ್ಡದಲ್ಲಿ ಬಿಸಿಲಿನ ತಾಪದಿಂದ ಬೆಂಕಿ ಹಬ್ಬಿ, ನೂರಾರು ಎಕರೆ ಅಪರೂಪದ ಸಸ್ಯ ಸಂಪತ್ತು ಬೆಂಕಿಗೆ ಆಹುತಿಯಾಗಿದೆ . ಕೆಮ್ಮಣ್ಣುಗುಂಡಿ ಗಿರಿಧಾಮದ ವ್ಯಾಪ್ತಿಯಲ್ಲೂ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಶ್ರಮಿಸಿದ್ದಾರೆ .


Provided by

ಈ ಘಟನೆಗಳು ಬಿಸಿಲಿನ ತೀವ್ರತೆ ಹೆಚ್ಚಾದ ಸಂದರ್ಭದಲ್ಲಿ ಸಂಭವಿಸುತ್ತಿದ್ದು, ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಅರಣ್ಯ ಇಲಾಖೆ ಮತ್ತು ಸ್ಥಳೀಯರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು, ಕಾಡ್ಗಿಚ್ಚು ನಿಯಂತ್ರಣಕ್ಕೆ ತರಲು ಶ್ರಮಿಸುತ್ತಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ