ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಮರ್ಡರ್!
23/10/2020
ಬಂಟ್ವಾಳ: ಯುವಕನೋರ್ವನನ್ನು ತಂಡವೊಂದು ಬರ್ಬರವಾಗಿ ಹತ್ಯೆಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಕಲ್ಲಡ್ಕ ನಿವಾಸಿ ಉಮರ್ ಫಾರೂಕ್ ಎಂಬ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನೂ ಲಭಿಸಿಲ್ಲ. ಬಂಟ್ವಾಳದಲ್ಲಿ ರೌಡಿ ಶೀಟರ್ ಸುರೇಂದ್ರನನ್ನು ಹತ್ಯೆ ಮಾಡಿರುವ ಘಟನೆ ಮಾಸುವ ಮೊದಲೇ ಬಂಟ್ವಾಳ ತಾಲೂಕಿನಲ್ಲಿ ಮತ್ತೊಂದು ಕೊಲೆಯ ಸುದ್ದಿ ದೊರಕಿದೆ.
ಸ್ನೇಹಿತರ ತಂಡವೇ ಈ ಕೃತ್ಯವನ್ನು ನಡೆಸಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿಗಳು ಇನ್ನೂ ಲಭಿಸಿಲ್ಲ.