ಕೇರಳದಲ್ಲಿ ಮತ್ತೊಂದು ನಿಫಾ ವೈರಸ್ ಪ್ರಕರಣ ಪತ್ತೆ: ಕರ್ನಾಟಕ ಗಡಿ ಭಾಗದಲ್ಲಿ ಕಟ್ಟೆಚ್ಚರ - Mahanayaka
12:34 PM Saturday 23 - August 2025

ಕೇರಳದಲ್ಲಿ ಮತ್ತೊಂದು ನಿಫಾ ವೈರಸ್ ಪ್ರಕರಣ ಪತ್ತೆ: ಕರ್ನಾಟಕ ಗಡಿ ಭಾಗದಲ್ಲಿ ಕಟ್ಟೆಚ್ಚರ

nifa in kerala
15/09/2023


Provided by

ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ನಲ್ಲಿ ಮತ್ತೊಂದು ನಿಫಾ ವೈರಸ್ ಕೇಸ್ ಪತ್ತೆಯಾಗಿದ್ದು,  ಕೇರಳ ಆರೋಗ್ಯ ಸಚಿವರ ಕಚೇರಿ ನಿಫಾ ಸೋಂಕು ತಗಲಿರುವ ಮತ್ತೊಂದು ಪ್ರಕರಣವನ್ನು ದೃಢಪಡಿಸಿದೆ.

39 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಅವರನ್ನು ಕೋಝಿಕ್ಕೋಡ್ ನ ಆಸ್ಪತ್ರೆಯಲ್ಲಿರಿಸಿ ನಿಗಾವಹಿಸಲಾಗಿದೆ. ಕೇರಳದಲ್ಲಿ ನಿಫಾ ವೈರಸ್ ಗೆ ಎರಡು ಸಾವು ಸಂಭವಿಸಿದ್ದು, ಐದು ಪ್ರಕರಣಗಳು ವರದಿಯಾಗಿವೆ. ಈ ನಡುವೆ ಕರ್ನಾಟಕ—ಕೇರಳ ಗಡಿಭಾಗದಲ್ಲಿ ಕಟ್ಟೆಚ್ಚರವಹಿಸಲಾಗಿದೆ.

ಕೇರಳದಲ್ಲಿ  ನಿಫಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಕರ್ನಾಟಕ ಸರ್ಕಾರ ಸಾರ್ವಜನಿಕರಿಗೆ ಸಲಹೆ-ಸೂಚನೆಗಳನ್ನು ಹೊರಡಿಸಿದೆ.

ಕೇರಳದಲ್ಲಿ ಸೋಂಕು ಪೀಡಿತ ಪ್ರದೇಶಗಳಿಗೆ ಜನರು ಅನಗತ್ಯವಾಗಿ ಪ್ರಯಾಣಿಸದಂತೆ ಸರ್ಕಾರ ಸೂಚಿಸಿದ್ದು, ಗಡಿ ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರಗಳಲ್ಲಿ ತೀವ್ರ ಕಟ್ಟೆಚ್ಚರ, ತಪಾಸಣೆ, ಕಣ್ಗಾವಲನ್ನು ಹೆಚ್ಚಿಸಲಾಗಿದೆ. ಕರ್ನಾಟಕಕ್ಕೆ ಪ್ರವೇಶಿಸುವ ಕೇರಳದ ಗಡಿಭಾಗಗಳಲ್ಲಿ ತಪಾಸಣೆ ಹೆಚ್ಚಿಸಲಾಗಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆಯ ಅಧಿಸೂಚನೆ ತಿಳಿಸಿದೆ.


ರಾಜ್ಯದಲ್ಲಿ ಇದುವರೆಗೂ ಯಾವುದೇ ನಿಪಾ ಪ್ರಕರಣಗಳು ಪತ್ತೆಯಾಗಿಲ್ಲ. ಆದರೆ ಕೇರಳದ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಿದ್ದೇನೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಆದರೆ ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯು ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ.

-ಸಚಿವ ದಿನೇಶ್ ಗುಂಡೂರಾವ್


 

ಇತ್ತೀಚಿನ ಸುದ್ದಿ