ಹಾಸನದಲ್ಲಿ ಮತ್ತೊಬ್ಬ ವ್ಯಕ್ತಿಯ ಹೃದಯಾಘಾತಕ್ಕೆ ಬಲಿ: 17ಕ್ಕೇರಿದ ಸರಣಿ ಹೃದಯಾಘಾತ ಪ್ರಕರಣ! - Mahanayaka
3:19 AM Saturday 18 - October 2025

ಹಾಸನದಲ್ಲಿ ಮತ್ತೊಬ್ಬ ವ್ಯಕ್ತಿಯ ಹೃದಯಾಘಾತಕ್ಕೆ ಬಲಿ: 17ಕ್ಕೇರಿದ ಸರಣಿ ಹೃದಯಾಘಾತ ಪ್ರಕರಣ!

govinda
28/06/2025

ಹಾಸನ:  ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣ ದಿನದಿಂದ ದಿನಕ್ಕೆ ಸರಣಿಯಾಗಿ ಮುಂದುವರಿಯುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಕಳೆದ ಒಂದು ತಿಂಗಳ ಅಂತರದಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.


Provided by

ಇದೀಗ ಗೋವಿಂದ(37) ಎಂಬ ಆಟೋ ಚಾಲಕರೊಬ್ಬರು ಹೃದಯಾಘಾಯತಕ್ಕೆ ಬಲಿಯಾಗಿದ್ದಾರೆ. ಇಂದು ಬೆಳಗ್ಗೆ ಏಳು ಗಂಟೆ ಸಮಯದಲ್ಲಿ ಆಟೋ ಚಲಾಯಿಸುವಾಗ  ಎದೆನೋವು ಕಾಣಿಸಿಕೊಂಡ ಹಿನ್ನೆಲೆ ತಾನೇ ಆಟೋ ಚಲಾಯಿಸಿಕೊಂಡು ಆಸ್ಪತ್ರೆಗೆ ಸೇರಿದ್ದ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಎದೆನೋವು ಕಾಣಿಸಿಕೊಂಡ ತಕ್ಷಣವೇ ಜಿಲ್ಲಾಸ್ಪತ್ರೆಗೆ ಗೋವಿಂದ ತೆರಳಿದ್ದರು. ಆದರೂ ಅವರ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಹೃದಯಾಘಾತ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರ ಅಧ್ಯಯನ ನಡೆಸುತ್ತಿದ್ದರೂ, ಈವರೆಗೆ ಸರಿಯಾದ ಉತ್ತರ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಈ ನಡುವೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸರಣಿ ಸಾವು ಮುಂದುವರಿದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ