ಕೋಟಾದಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ: ಈ ವರ್ಷದಲ್ಲಿ ನಡೆದ 26 ನೇ ಸೂಸೈಡ್ ಕೇಸ್..! - Mahanayaka
10:51 PM Wednesday 22 - October 2025

ಕೋಟಾದಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ: ಈ ವರ್ಷದಲ್ಲಿ ನಡೆದ 26 ನೇ ಸೂಸೈಡ್ ಕೇಸ್..!

18/09/2023

ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇದು ಕಳೆದ ಎರಡು ವಾರಗಳಲ್ಲಿ ನಡೆದ ಎರಡನೇ ಪ್ರಕರಣವಾಗಿದೆ. ರಾಜಸ್ಥಾನದ ಕೋಚಿಂಗ್ ಹಬ್ ನಲ್ಲಿ ಈ ವರ್ಷ ನಡೆದ 26 ನೇ ಸೂಸೈಡ್ ಪ್ರಕರಣವಾಗಿದೆ.
‌ಪ್ರಾಥಮಿಕ ತನಿಖೆಯ ಪ್ರಕಾರ, ಅಪ್ರಾಪ್ತ ಬಾಲಕಿ ವಿಷ ಸೇವಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಈ ಕೃತ್ಯಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರ ಪ್ರಕಾರ, ವಿದ್ಯಾರ್ಥಿನಿ ಉತ್ತರ ಪ್ರದೇಶದ ಮೌ ಪ್ರದೇಶದ ನಿವಾಸಿ. ಬಾಲಕಿ ವಿಷ ಸೇವಿಸಿದ್ದಾಳೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಭಗವತ್ ಸಿಂಗ್ ಹಿಂಜರ್ ತಿಳಿಸಿದ್ದಾರೆ.

ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.
ಎರಡು ದಿನಗಳ ಹಿಂದೆ, ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಗೆ ತಯಾರಿ ನಡೆಸುತ್ತಿದ್ದ 16 ವರ್ಷದ ವಿದ್ಯಾರ್ಥಿನಿ ರಾಜಸ್ಥಾನದ ಕೋಟಾದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಹತೆ ಪಡೆಯುವ ಭರವಸೆಯೊಂದಿಗೆ ಪ್ರತಿವರ್ಷ ಸುಮಾರು ಎರಡು ಲಕ್ಷ ವಿದ್ಯಾರ್ಥಿಗಳು ಕೋಟಾಕ್ಕೆ ಬರುತ್ತಾರೆ.

ಮಾಹಿತಿಯ ಪ್ರಕಾರ, ಈ ವರ್ಷ ಕೇವಲ ಎಂಟು ತಿಂಗಳಲ್ಲಿ ಕೋಟಾದಲ್ಲಿ ಒಟ್ಟು 26 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ