ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: ಮತ್ತೊಬ್ಬ ಉಗ್ರನ ಹತ್ಯೆ

09/05/2024

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಮತ್ತೊಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಲಷ್ಕರ್-ಎ-ತೊಯ್ಬಾ ಶಾಖೆಯ ಟಿಆರ್ ಎಫ್‌ನ ಉನ್ನತ ಕಮಾಂಡರ್ ಬಾಸಿತ್ ದಾರ್ ಅವರನ್ನು ಭದ್ರತಾ ಪಡೆಗಳು ಎನ್ ಕೌಂಟರ್ ನಲ್ಲಿ ಕೊಂದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ.

ದಾರ್, ಭದ್ರತಾ ಸಂಸ್ಥೆಗಳ ‘ಮೋಸ್ಟ್ ವಾಂಟೆಡ್ ಲಿಸ್ಟ್’ ನಲ್ಲಿದ್ದ. ಮತ್ತು ಹತ್ತು ಲಕ್ಷ ರೂಪಾಯಿ ಬಹುಮಾನವನ್ನು ಹೊಂದಿದ್ದನು. ಪೊಲೀಸ್ ಸಿಬ್ಬಂದಿ ಮತ್ತು ನಾಗರಿಕರ ಹತ್ಯೆಯ 18 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಅವನು ಭಾಗಿಯಾಗಿದ್ದಾನೆ ಎಂದು ಕಾಶ್ಮೀರದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ತಿಳಿಸಿದ್ದಾರೆ.

ಕುಲ್ಗಾಮ್‌ನ ರೆಡ್ವಾನಿ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಸೋಮವಾರ ತಡರಾತ್ರಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು.
ಕಾರ್ಯಾಚರಣೆ ಮುಂದುವರಿದಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಬುಧವಾರ ಈ ಪ್ರದೇಶದಲ್ಲಿ ಭಯೋತ್ಪಾದಕ ಮತ್ತು ಭದ್ರತಾ ಪಡೆಗಳ ನಡುವೆ ಹೊಸ ಗುಂಡಿನ ಚಕಮಕಿ ನಡೆಯಿತು ಮತ್ತು ಮೂರನೇ ಭಯೋತ್ಪಾದಕನನ್ನು ಸಹ ತಟಸ್ಥಗೊಳಿಸಲಾಯಿತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version