ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರಿಗೆ ಡಿಕ್ಕಿ ಹೊಡೆದ ಮತ್ತೊಂದು ವಾಹನ: ಐವರು ಸ್ಥಳದಲ್ಲೇ ಸಾವು

15/11/2023
ಚಂಡೀಗಢ: ಕಾರು ಹಾಗೂ ಮತ್ತೊಂದು ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ 5 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹರ್ಯಾಣದ ಕುರುಕ್ಷೇತ್ರದಲ್ಲಿ ನಡೆದಿದೆ.
ಇಲ್ಲಿನ ಥಿಕ್ರಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯ ಬಳಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಬುಧವಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ಮೊದಲು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಇನ್ನೊಂದು ಅಪರಿಚಿತ ವಾಹನ ಕಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದ ಪರಿಣಾಮ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.