ಆನೆ ದಾಳಿಗೆ ಮತ್ತೊಂದು ಬಲಿ: 4 ದಿನಗಳ ಅಂತರದಲ್ಲಿ ಎರಡನೇ ಬಲಿ

ಚಿಕ್ಕಮಗಳೂರು: ಆನೆ ದಾಳಿಗೆ ಕಾಫಿನಾಡಲ್ಲಿ ಮತ್ತೊಂದು ಬಲಿಯಾಗಿದ್ದು, 4 ದಿನದ ಅಂತರದಲ್ಲಿ ಇದು 2ನೇ ಸಾವಾಗಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಂಡುವಾನೆ ಗ್ರಾಮದ ಬಳಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.
ಸುಬ್ರಾಯಗೌಡ (65) ಮೃತ ದುರ್ದೈವಿಯಾಗಿದ್ದಾರೆ. ಕಳೆದ ಗುರುವಾರವಾಷ್ಟೆ 25 ವರ್ಷದ ಯುವತಿ ಕವಿತಾ ಸಾವನ್ನಪ್ಪಿದ್ದಳು. 4 ದಿನ ಕಳೆಯುವಷ್ಟರಲ್ಲಿ ಇಂದು ಮತ್ತೊಂದು ಆನೆ ದಾಳಿಗೆ ಬಲಿ ಪ್ರಕರಣ ನಡೆದಿದೆ.
ಮಲೆನಾಡಲ್ಲಿ ಕಾಡಾನೆ ಹಾವಾಳಿ ಮಿತಿ ಮೀರಿದೆ. ಇಂದು ಮೂಡಿಗೆರೆ–ಬೇಲೂರು ಗಡಿಯಲ್ಲಿ 25 ಆನೆಗಳು ಕಾಣಿಸಿಕೊಂಡಿದ್ದವು. ಮೇಲಿಂದ ಮೇಲೆ ಆನೆ ದಾಳಿ ಪ್ರಕರಣ ಕಂಡು ಮಲೆನಾಡಿಗರು ಕಂಗಾಲಾಗಿದ್ದಾರೆ.
ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನಲ್ಲಿ ಈ ಘಟನೆ ನಡೆದಿದೆ.
ಬಾಳೆಹೊನ್ನೂರಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ ಹಿನ್ನೆಲೆ, ಅರಣ್ಯ ಇಲಾಖೆಯ ವಿರುದ್ದ ಮಲೆನಾಡಿಗರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಳೆಹೊನ್ನೂರಿನಲ್ಲಿ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಸಾರ್ವಜನಿಕರು, ಅರಣ್ಯ ಇಲಾಖೆಯ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD