9:37 AM Wednesday 20 - August 2025

ಕೊವಿಡ್‌ ಗೆ ಓರ್ವ ಬಲಿ: ಸಕ್ರಿಯ ಪ್ರಕರಣಗಳ ಸಂಖ್ಯೆ 479ಕ್ಕೆ ಏರಿಕೆ

death
27/12/2023

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ನಿರಂತರ  ಹೆಚ್ಚಳವಾಗುತ್ತಿದ್ದು ಬುಧವಾರ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ.  ಈಗಾಗಲೇ 103 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 479ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 103 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.  ಇಂದು ರಾಜ್ಯದಲ್ಲಿ 7262 ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಪಾಸಿಟಿವ್ ಪ್ರಮಾಣ ಶೇ. 1.41 ರಷ್ಟು ಇದೆ. ಬೆಂಗಳೂರಿನಲ್ಲಿ 2,321 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಪೈಕಿ 80 ಮಂದಿಗೆ ಸೋಂಕು ದೃಢಪಟ್ಟಿದೆ.

ಶಿವಮೊಗ್ಗ, ಚಾಮರಾಜನಗರ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ 2 ಪ್ರಕರಣ, ವಿಜಯಪುರದಲ್ಲಿ 1. ತುಮಕೂರಿನಲ್ಲಿ 1, ಮೈಸೂರಿನಲ್ಲಿ 3, ಮಂಡ್ಯದಲ್ಲಿ 8 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ಇತ್ತೀಚಿನ ಸುದ್ದಿ

Exit mobile version